
ಬೆಳಗಾವಿ: ಪೊಲೀಸ್ ಠಾಣೆಯಲ್ಲಿಯೇ ಎಣ್ಣೆ ಪಾರ್ಟಿ ಮಾಡಿದ ಪೊಲೀಸ್ ಕಾನ್ಸ್ಟೇಬಲ್ ನನ್ನು ಅಮಾನತು ಮಾಡಲಾಗಿದೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಅಂಕಲಿ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಮಚಂದ್ರ ಖೋತ ಅವರನ್ನು ಅಮಾನತು ಮಾಡಲಾಗಿದೆ. ನಿನ್ನೆ ರಾತ್ರಿ ಹೆಡ್ ಕಾನ್ಸ್ಟೇಬಲ್ ರಾಮಚಂದ್ರ ಎಣ್ಣೆ ಪಾರ್ಟಿ ಮಾಡಿದ್ದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೇದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.