alex Certify ತಡರಾತ್ರಿ ರೇವ್ ಪಾರ್ಟಿ ಮೇಲೆ ರೇಡ್: ಯುವತಿಯರು, ಯುವಕರು ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ರೇವ್ ಪಾರ್ಟಿ ಮೇಲೆ ರೇಡ್: ಯುವತಿಯರು, ಯುವಕರು ವಶಕ್ಕೆ

ಬೆಂಗಳೂರಿನ ಜೀವನ್ ಭೀಮಾನಗರ ಪಬ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಪಬ್ ನಲ್ಲಿ ರೇವ್ ಪಾರ್ಟಿ ನಡೆಸಲಾಗಿದ್ದು, ಇನ್ನೂರಕ್ಕೂ ಅಧಿಕ ಜನ ಭಾಗಿಯಾಗಿದ್ದರು. ದಾಳಿಯ ವೇಳೆ ಗಾಂಜಾ ಇಟ್ಟುಕೊಂಡಿದ್ದ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. 40 ಜನರ ಮೆಡಿಕಲ್ ಟೆಸ್ಟ್ ಮಾಡಲಾಗಿದೆ. ತಡರಾತ್ರಿವರೆಗೂ ರೇವ್ ಪಾರ್ಟಿ ನಡೆಸಲಾಗಿದ್ದು, ಈ ವೇಳೆ ಪೊಲೀಸರು ದಾಳಿ ಮಾಡಿದ್ದಾರೆ.

ವೀಕೆಂಡ್ ಪಾರ್ಟಿಯಲ್ಲಿ ಮಾದಕ ದ್ರವ್ಯಗಳನ್ನು ಬಳಸಲಾಗಿದೆ. ನಾಲ್ವರನ್ನು ವಶಕ್ಕೆ ಪಡೆದಿದ್ದು, ಗಾಂಜಾ ಸೇವನೆ ಶಂಕೆ ಮೇಲೆ 40 ಮಂದಿ ಮೆಡಿಕಲ್ ಟೆಸ್ಟ್ ನಡೆಸಲಾಗಿದೆ. ವೀಕೆಂಡ್ ನಲ್ಲಿ ಪಾರ್ಟಿ ಆಯೋಜನೆ ಸಾಮಾನ್ಯವಾಗಿದ್ದು, ಗಾಂಜಾ ಸೇವನೆಯೊಂದಿಗೆ ರೇವ್ ಪಾರ್ಟಿ ನಡೆಸಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...