
ಹಾಸನ ಜಿಲ್ಲೆ ಆಲೂರು ತಾಲೂಕಿನ ಹೊಂಕರವಳ್ಳಿ ಸಮೀಪ ರೇವ್ ಪಾರ್ಟಿ ಮೇಲೆ ದಾಳಿ ಮಾಡಿರುವ ಪೊಲೀಸರು ನೂರಕ್ಕೂ ಹೆಚ್ಚು ಯುವಕರು, ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ.
ಶನಿವಾರ ರಾತ್ರಿ ಹೊಂಕರವಳ್ಳಿ ಸಮೀಪದ ನಂದೀಶ್ವರ ಎಸ್ಟೇಟ್ ನಲ್ಲಿ ಪಾರ್ಟಿ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿಯ ಐಷಾರಾಮಿ ಕಾರ್ ಗಳು, ಬೈಕುಗಳನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನಿಂದ ಬಂದಿದ್ದ ಯುವಕರು, ಯುವತಿಯರು ಪಾರ್ಟಿಯಲ್ಲಿ ತೊಡಗಿದ್ದರು. ಮಾದಕ ವಸ್ತುಗಳನ್ನು ಬಳಸುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ಮಾಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.