
ಇಂಡಿಗೋ ವಿಮಾನದ ಗಗನಸಖಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.
ಅಮೃತಸರ ಮಾರ್ಗವಾಗಿ ಶ್ರೀನಗರದಿಂದ ಲಕ್ನೋಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದ್ದು, ಶ್ರೀನಗರದಿಂದ ವಿಮಾನ ಹಾರಾಟ ಆರಂಭಿಸಿದ ಬಳಿಕ ಪ್ರಯಾಣಿಕ ಗಗನಸಖಿಯೊಂದಿಗೆ ಅಸಭ್ಯವಾಗಿ ವರ್ತಿಸಲು ಶುರು ಮಾಡಿದ್ದಾನೆ.
ಕೂಡಲೇ ಈ ವಿಚಾರವನ್ನು ಅಮೃತಸರ ವಿಮಾನ ನಿಲ್ದಾಣದ ಅಧಿಕಾರಿಗಳ ಗಮನಕ್ಕೆ ತಂದಿದ್ದು, ವಿಮಾನ ಅಮೃತಸರದಲ್ಲಿ ಇಳಿಯುತ್ತಲೇ ಕಾದು ನಿಂತಿದ್ದ ಭದ್ರತಾ ಸಿಬ್ಬಂದಿ ಪ್ರಯಾಣಿಕನನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.