alex Certify ಗಗನಸಖಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಇಂಡಿಗೋ ವಿಮಾನ ಪ್ರಯಾಣಿಕ ‘ಅಂದರ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಗನಸಖಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಇಂಡಿಗೋ ವಿಮಾನ ಪ್ರಯಾಣಿಕ ‘ಅಂದರ್’

ಇಂಡಿಗೋ ವಿಮಾನದ ಗಗನಸಖಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.

ಅಮೃತಸರ ಮಾರ್ಗವಾಗಿ ಶ್ರೀನಗರದಿಂದ ಲಕ್ನೋಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದ್ದು, ಶ್ರೀನಗರದಿಂದ ವಿಮಾನ ಹಾರಾಟ ಆರಂಭಿಸಿದ ಬಳಿಕ ಪ್ರಯಾಣಿಕ ಗಗನಸಖಿಯೊಂದಿಗೆ ಅಸಭ್ಯವಾಗಿ ವರ್ತಿಸಲು ಶುರು ಮಾಡಿದ್ದಾನೆ.

ಕೂಡಲೇ ಈ ವಿಚಾರವನ್ನು ಅಮೃತಸರ ವಿಮಾನ ನಿಲ್ದಾಣದ ಅಧಿಕಾರಿಗಳ ಗಮನಕ್ಕೆ ತಂದಿದ್ದು, ವಿಮಾನ ಅಮೃತಸರದಲ್ಲಿ ಇಳಿಯುತ್ತಲೇ ಕಾದು ನಿಂತಿದ್ದ ಭದ್ರತಾ ಸಿಬ್ಬಂದಿ ಪ್ರಯಾಣಿಕನನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...