ಬೆಂಗಳೂರು : ನಮ್ಮ ಮೆಟ್ರೋ ಹಸಿರು ಮಾರ್ಗದ ಪೀಣ್ಯ ಕೈಗಾರಿಕಾ ಪ್ರದೇಶ-ನಾಗಸಂದ್ರ ನಿಲ್ದಾಣಗಳ ನಡುವೆ ಜನವರಿ 26 ರಿಂದ 28 ರವರೆಗೆ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು BMRCL ಪ್ರಕಟಣೆ ಹೊರಡಿಸಿದೆ.
ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಿತ ಮಾರ್ಗದಲ್ಲಿ ಕಾಮಗಾರಿ ಆರಂಭವಾಗುವ ಹಿನ್ನೆಲೆಯಲ್ಲಿ ಜನವರಿ 26 ರಿಂದ 28 ರವರೆಗೆ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು ಬಿಎಂಆರ್ಸಿಎಲ್ ಪ್ರಕಟಣೆ ಹೊರಡಿಸಿದೆ. ಈ ದಿನಗಳಲ್ಲಿ ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ.
ಈ ಹಿನ್ನೆಲೆ ಜಾಲಹಳ್ಳಿ, ದಾಸರಹಳ್ಳಿ ಮತ್ತು ನಾಗಸಂದ್ರ ನಿಲ್ದಾಣಗಳಿಂದ/ನಿಲ್ದಾಣಗಳಿಗೆ ತೆರಳುವ ಪ್ರಯಾಣಿಕರಿಗೆ ಮೂರು ದಿನ ತೊಂದರೆಯಾಗಲಿದೆ. ಜನವರಿ 29ರಂದು ಬೆಳಗ್ಗೆ 5 ಗಂಟೆಗೆ ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ನಡುವಿನ ರೈಲು ಸಂಚಾರ ಮತ್ತೆ ಆರಂಭವಾಗಲಿದೆ ಎಂದು BMRCL ಪ್ರಕಟಣೆ ಹೊರಡಿಸಿದೆ.