ಬೆಂಗಳೂರು : ನಾಳೆ ಕರ್ನಾಟಕ ಬಂದ್ ಇದ್ದರೂ ಎಂದಿನಂತೆ ಬಿಎಂಟಿಸಿ, ಹಾಗೂ ಕೆಎಸ್ ಆರ್ ಟಿಸಿ ಬಸ್ ಸಂಚಾರ ಇರಲಿದೆ.
ಹೌದು, ಸಾರಿಗೆ ನೌಕರರು ನಾಳೆ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸಾರಿಗೆ ನಿಗಮದ ಅಧಿಕಾರಿಗಳು ಸೂಚನೆ ನೀಡಿದ್ದು, ನಾಳೆ ಬಂದ್ ನಲ್ಲಿ ಯಾರೂ ಭಾಗಿ ಆಗುವ ಹಾಗಿಲ್ಲ, ಒಂದು ವೇಳೆ ಅನಗತ್ಯ ರಜೆ ಹಾಕಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹಾಗೂ ರಾಜ್ಯಾದ್ಯಂತ ಕೆಎಸ್ ಆರ್ ಟಿಸಿ ಬಸ್ ಗಳು ಎಂದಿನಂತೆ ಸಂಚರಿಸಲಿದೆ. ಇದರಿಂದ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗುವುದಿಲ್ಲ.
ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಸೆ.29ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ವಿವಿಧ ಸಂಘಟನೆಗಳು ಬೆಂಬಲ ನೀಡಿದೆ.