ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಆಂಧ್ರಪ್ರದೇಶದ ನರಸಾಪುರ ಮತ್ತು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಗಳ ನಡುವೆ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸೇವೆಯನ್ನು ದಕ್ಷಿಣ ಮಧ್ಯ ರೈಲ್ವೆ ವಿಸ್ತರಿಸಿದೆ.
ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಡಿಸೆಂಬರ್ 27ಕ್ಕೆ ಕೊನೆಯಾಗಲಿದ್ದ ನರಸಾಪುರ -ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲು(07153) ಜನವರಿ 3ರಿಂದ ಮಾರ್ಚ್ 28ರ ವರೆಗೆ ತನ್ನ ಸೇವೆ ಮುಂದುವರಿಸಲಿದೆ.
ಡಿಸೆಂಬರ್ 28ಕ್ಕೆ ಕೊನೆಯಾಗಲಿದ್ದ ಈ ರೈಲಿನ(07154) ಹಿಂದಿರುವ ಸಂಚಾರ ಮಾರ್ಚ್ 29 ರವರೆಗೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.