ಬೆಂಗಳೂರು: ರಾಜ್ಯದಲ್ಲಿಯೂ ಪತಂಜಲಿ ಉತ್ಪನ್ನಗಳು ಬ್ಯಾನ್ ಆಗುವ ಸಾಧ್ಯತೆ ಇದೆ. ಉತ್ತರಾಖಂಡ್ ನಲ್ಲಿ 14 ಪತಂಜಲಿ ಉತ್ಪನ್ನಗಳನ್ನು ಬ್ಯಾನ್ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದೆ.
ಪತಂಜಲಿ ಉತ್ಪನ್ನಗಳನ್ನು ಪರೀಕ್ಷೆ ಮಾಡುವಂತೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಆದೇಶಿಸಿದ್ದಾರೆ.
ಸುಪ್ರೀಂ ಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ಉತ್ತರಾಖಂಡ ಸರ್ಕಾರ ಪತಂಜಲಿ ಆಯುರ್ವೇದ ಸಂಸ್ಥೆಯ ಉತ್ಪನ್ನಗಳ ಮೇಲೆ ಗದಾ ಪ್ರಹಾರ ನಡೆಸಿದ್ದು, ಬಾಬಾ ರಾಮದೇವ್ ಅವರ ಪತಂಜಲಿ ಸಂಸ್ಥೆ ಉತ್ಪಾದಿಸುವ 14 ಆಯುರ್ವೇದ ಉತ್ಪನ್ನಗಳಿಗೆ ನೀಡಲಾಗಿದ್ದ ಮಾರಾಟ ಪರವಾನಿಗೆಯನ್ನು ರದ್ದು ಮಾಡಿದೆ. ಇದರ ಬೆನ್ನಲ್ಲೇ ರಾಜ್ಯ ಆರೋಗ್ಯ ಇಲಾಖೆ ಕೂಡ ಕ್ರಮ ಕೈಗೊಂಡಿದ್ದು, ಪರಿಶೀಲನೆಗೆ ಸಚಿವರು ಆದೇಶಿಸಿದ್ದಾರೆ.