ನವದೆಹಲಿ: ಆಯುಷ್ಮಾನ್ ಯೋಜನೆ ಫಲಾನುಭವಿಗಳಿಗೆ ಅಪರೂಪದ ಕಾಯಿಲೆ ಇದ್ದಲ್ಲಿ ಒಂದು ಸಲ ಚಿಕಿತ್ಸೆ ಪಡೆಯಲು ಅವಕಾಶ ನೀಡಲಾಗುವುದು.
ಕೇಂದ್ರ ಆರೋಗ್ಯ ಸಚಿವಾಲಯದ ವತಿಯಿಂದ ರಾಷ್ಟ್ರೀಯ ಅಪರೂಪದ ಕಾಯಿಲೆಗಳು ನೀತಿ -2021 ಕರಡುವಿನಲ್ಲಿ ಉಲ್ಲೇಖಿಸಲಾಗಿದೆ. ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ ಒಂದು ಸಲ ಚಿಕಿತ್ಸೆ ಅಗತ್ಯವಾಗಿರುವ ಅಪರೂಪದ ಕಾಯಿಲೆಗಳಿಗೆ ಕೇಂದ್ರ ಸರ್ಕಾರದ ರಾಷ್ಟ್ರೀಯ ಆರೋಗ್ಯ ನಿಧಿ ಯೋಜನೆ ಅಡಿ 20 ಲಕ್ಷ ರೂಪಾಯಿಯವರೆಗೆ ಹಣಕಾಸು ನೆರವು ನೀಡಲಾಗುವುದು ಎಂದು ಹೇಳಲಾಗಿದೆ.