alex Certify BIG NEWS: ಬಿಹಾರದ ನಿತೀಶ್ ಸರ್ಕಾರಕ್ಕೆ ಮುಖಭಂಗ; ಮೀಸಲಾತಿ ತಿದ್ದುಪಡಿ ಕಾಯ್ದೆ ರದ್ದುಗೊಳಿಸಿದ ‘ಹೈಕೋರ್ಟ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಹಾರದ ನಿತೀಶ್ ಸರ್ಕಾರಕ್ಕೆ ಮುಖಭಂಗ; ಮೀಸಲಾತಿ ತಿದ್ದುಪಡಿ ಕಾಯ್ದೆ ರದ್ದುಗೊಳಿಸಿದ ‘ಹೈಕೋರ್ಟ್’

ಮಹತ್ವದ ಬೆಳವಣಿಗೆಯೊಂದರಲ್ಲಿ ಪಾಟ್ನಾ ಹೈಕೋರ್ಟ್ ಬಿಹಾರ ಮೀಸಲಾತಿ (ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ) ತಿದ್ದುಪಡಿ ಕಾಯಿದೆ 2023 ಮತ್ತು ಬಿಹಾರ (ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ) ಮೀಸಲಾತಿ ತಿದ್ದುಪಡಿ ಕಾಯಿದೆ 2023 ರದ್ದುಗೊಳಿಸಿದೆ. ಕಾಯಿದೆ ಪ್ರಕಾರ ಮೀಸಲಾತಿ ಕೋಟಾವನ್ನು ಅಸ್ತಿತ್ವದಲ್ಲಿರುವ 50 ಪ್ರತಿಶತದಿಂದ 65 ಪ್ರತಿಶತಕ್ಕೆ ಹೆಚ್ಚಿಸಲಾಗಿತ್ತು.

ಮುಖ್ಯ ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಮತ್ತು ನ್ಯಾಯಮೂರ್ತಿ ಹರೀಶ್ ಕುಮಾರ್ ಅವರ ವಿಭಾಗೀಯ ಪೀಠವು ಹಿಂದುಳಿದ ವರ್ಗಗಳು, ಅತ್ಯಂತ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿಯನ್ನು ಈಗಿರುವ ಶೇ.50ರಿಂದ ಶೇ.65ಕ್ಕೆ ಹೆಚ್ಚಿಸಲು ಬಿಹಾರ ಶಾಸಕಾಂಗವು ಅಂಗೀಕರಿಸಿದ ತಿದ್ದುಪಡಿಯನ್ನು ಪ್ರಶ್ನಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಪರಿಗಣಿಸಿ ಆದೇಶಿಸಿದೆ.

ಸದ್ಯ ಜಾರಿಯಲ್ಲಿರುವ ಮೀಸಲಾತಿ ಪ್ರಮಾಣ ಜೊತೆಗೆ 10 ಪ್ರತಿಶತದಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (EWS) ಮೀಸಲಿಡಲಾಗಿದೆ. ಒಟ್ಟಾರೆಯಾಗಿ ತೆಗೆದುಕೊಂಡರೆ, ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ 75 ಪ್ರತಿಶತದಷ್ಟು ಸೀಟುಗಳನ್ನು SC ಗಳು, ST ಗಳು, OBC ಗಳು, EBC ಗಳು ಮತ್ತು EWS ಗಳಿಗೆ ಮೀಸಲಿಡಲಾಗಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಿಹಾರ ಸರ್ಕಾರ ಹೊರಡಿಸಿದ ಆದೇಶದ ಪ್ರಕಾರ ಮೀಸಲಾತಿಯಿಲ್ಲದ ವರ್ಗಕ್ಕೆ ಕೇವಲ 25 ಪ್ರತಿಶತದಷ್ಟು ಸೀಟುಗಳು ಮಾತ್ರ ಲಭ್ಯವಿವೆ.

ಹೈಕೋರ್ಟ್ ಮೀಸಲಾತಿ ತಿದ್ದುಪಡಿಗಳನ್ನು ರದ್ದು ಮಾಡಿ, ಇದು ಭಾರತೀಯ ಸಂವಿಧಾನದ ಅಡಿಯಲ್ಲಿ ಸಮಾನತೆಯ ಉಲ್ಲಂಘನೆ ಎಂದು ಹೇಳಿದೆ. ಸದ್ಯ ಪ್ರಕರಣದ ಅಂತಿಮ ಆದೇಶ ಬರಬೇಕಿದೆ.

ಹೈಕೋರ್ಟ್ ಆದೇಶವು ಆಡಳಿತಾರೂಢ ಎನ್‌ಡಿಎ ಹಾಗೂ ಪ್ರತಿಪಕ್ಷಗಳಾದ ಆರ್‌ಜೆಡಿ ಮತ್ತು ಕಾಂಗ್ರೆಸ್‌ಗೆ ಭಾರಿ ಹಿನ್ನಡೆಯಾಗಿದೆ. ಎರಡೂ ಬಣಗಳು ಮೀಸಲಾತಿ ಕೋಟಾವನ್ನು 50 ಪ್ರತಿಶತದಿಂದ 65 ಪ್ರತಿಶತಕ್ಕೆ ಹೆಚ್ಚಿಸಲು ಸಮ್ಮತಿಸಿದ್ದವು. ಜೊತೆಗೆ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ 10 ಪ್ರತಿಶತದಷ್ಟು ಸೀಟುಗಳನ್ನು ಮೀಸಲಿಟ್ಟಿದ್ದವು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...