ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ನಟ ದರ್ಶನ್ ಗೆಳತಿ, ಪವಿತ್ರಾ ಗೌಡ ಜಾಮೀನು ಅರ್ಜಿ ಹಿಂಪಡೆದಿದ್ದಾರೆ.
ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ಪವಿತ್ರಾ ಗೌಡ ಹೈಕೋರ್ಟ್ ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲಾಯಿತು. ಈ ವೇಳೆ ನ್ಯಾಯಮೂರ್ತಿಗಳು ಈಗಾಗಲೇ ಪ್ರಕರಣದ ಬಗ್ಗೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಚಾರ್ಜ್ ಶೀಟ್ ಸಲ್ಲಿಕೆಗೂ ಮೊದಲೇ ಜಾಮೀನು ಅರ್ಜಿ ಸಲ್ಲಿಸಿದ್ದೀರಿ. ಹೀಗಾಗಿ ಜಾಮೀನು ಅರ್ಜಿ ವಾಪಾಸ್ ಪಡೆದು ಸೆಷನ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪವಿತ್ರಾ ಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ಜಾಮೀನು ಅರ್ಜಿ ಹಿಂಪಡೆದಿದ್ದಾರೆ.