ಬೆಂಗಳೂರು : ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆದಿದ್ದು, ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಕುಮಾರಸ್ವಾಮಿ, ಸಂಸದೆ ಸುಮಲತಾ ಮತ್ತಿತರರಿದ್ದರು.
ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತು ಸರ್ಕಾರ ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದೆ.
ಈ ವೇಳೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಕಾವೇರಿ ಮತ್ತು ಮಹದಾಯಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ನಾಡಿನ ಜನರ ಹಿತ ರಕ್ಷಣೆಗಾಗಿ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡರೂ ನಾವು ಬೆಂಬಲಿಸುತ್ತೇವೆ ಎಂದರು. ಬರಪೀಡಿತ ಪ್ರದೇಶಗಳ ಘೋಷಣೆ ವಿಚಾರದ ಬಗ್ಗೆ ಮಾತನಾಡಿದ ಕುಮಾರಸ್ವಾಮಿ ಕೊಟ್ಟ ಗ್ಯಾರಂಟಿ ಸ್ಕೀಮ್ ಗಳ ಬಗ್ಗೆ ಪ್ರಚಾರ ಮಾಡುತ್ತಾ ಸರ್ಕಾರ ಕಾಲ ಕಳೆದಿದೆ. ಜನರ ಜೀವದ ಬಗ್ಗೆ ಹಾಗೂ ರೈತರ ಬದುಕಿನ ಗ್ಯಾರಂಟಿ ಬಗ್ಗೆ ಗಮನ ಕೊಡಿ ಎಂದು ಸಲಹೆ ನೀಡಿದರು.