alex Certify Anna Bhagya Scheme : ಇನ್ನೂ 1 ತಿಂಗಳು ಅಕ್ಕಿ ಬದಲಿಗೆ ಹಣ ಪಾವತಿ : ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Anna Bhagya Scheme : ಇನ್ನೂ 1 ತಿಂಗಳು ಅಕ್ಕಿ ಬದಲಿಗೆ ಹಣ ಪಾವತಿ : ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ

ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ ಇನ್ನೂ ಒಂದು ತಿಂಗಳು ಅಕ್ಕಿ ಬದಲಿಗೆ ಹಣ ಪಾವತಿ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಕೆ ಹೆಚ್ ಮುನಿಯಪ್ಪ ಪಡಿತರದಾರರಿಗೆ ಅಕ್ಕಿ ನೀಡಲು ರಾಜ್ಯ ಸರ್ಕಾರ ಪ್ರಯತ್ನ ಮುಂದುವರೆಸಿದೆ. ಕೇಂದ್ರ ಸರ್ಕಾರದ ಮಾದರಿಯಲ್ಲಿ ಅಕ್ಕಿ ಖರೀದಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಅನ್ನಭಾಗ್ಯ ಯೋಜನೆಯಡಿ ಇನ್ನೂ ಒಂದು ತಿಂಗಳು ಅಕ್ಕಿ ಬದಲಿಗೆ ಹಣ ಪಾವತಿ ಮಾಡಲಾಗುತ್ತದೆ ನಾಳೆಯೊಳಗೆ ರಾಜ್ಯಾದ್ಯಂತ ಸುಮಾರು 1 ಕೋಟಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆಯಾಗಲಿದೆ ಎಂದು ಸಚಿವರು ಹೇಳಿದರು. ಅಕ್ಕಿ ಖರೀದಿಗೆ ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳೊಂದಿಗೆ ಮತ್ತೊಮ್ಮೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದರು.

ಹೊಸದಾಗಿ ಬಿಪಿಎಲ್ ಪಡಿತರ ಚೀಟಿಗೆ ಕೋರಿ 3 ಲಕ್ಷ ಅರ್ಜಿಗಳು ಬಂದಿವೆ. ಆದಷ್ಟು ಬೇಗ ಎಲ್ಲರಿಗೂ ಕಾರ್ಡ್ ವಿತರಣೆ ಮಾಡಲಾಗುವುದು. ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್ ವಿತರಣೆಗೆ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.ಆರೋಗ್ಯ ಯೋಜನೆಗಾಗಿ ಕಾರ್ಡ್ ಬಯಸುವವರಿಗೆ ಬಿಪಿಎಲ್ ಎಬಿ ಎಂದು ನಮೂದಿಸಿ ಕಾರ್ಡ್ ನೀಡುವ ಚಿಂತನೆ ಇದೆ. ಇಂತವರಿಗೆ ಪಡಿತರ ಯೋಜನೆ ಲಾಭ ಇರುವುದಿಲ್ಲ. ಆದರೆ ಆರೋಗ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ಈ ಕಾರ್ಡ್ ಬಳಸಿಕೊಳ್ಳಬಹುದು.
ಇನ್ನು ಆರೋಗ್ಯ ಯೋಜನೆಗಾಗಿಯೇ ಬಿಪಿಎಲ್ ಕಾರ್ಡ್ ವಿತರಿಸುವ ಬಗ್ಗೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿ ಕಾರ್ಡ್ ವಿತರಿಸಲು ನಿರ್ಧರಿಸಲಾಗುವುದು ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...