ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಜನನ ಮರಣ ನೋಂದಣಿ ದಾಖಲಿಸಲು ಮತ್ತು ನಾಗರಿಕ ನೋಂದಣಿ ಪದ್ಧತಿ ಬಲಪಡಿಸುವ ಉದ್ದೇಶದಿಂದ ಪಂಚಾಯಿತಿ ಮಟ್ಟದ ಜನನ-ಮರಣ ನೋಂದಣಾಧಿಕಾರಿಗಳನ್ನಾಗಿ ಪಿಡಿಒಗಳನ್ನು ನೇಮಕ ಮಾಡಲಾಗಿದೆ. ಗ್ರಾಮಲೆಕ್ಕಿಗರಿಗೆ ಉಪನೊಂದಣಾಧಿಕಾರಿ ಹೊಣೆ ನೀಡಲಾಗಿದೆ.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಿಗರಿಗೆ ಹೊಸ ಜವಾಬ್ದಾರಿ ನೀಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ನಾಗರಿಕ ನೋಂದಣಿ ಪದ್ಧತಿ ಬಲಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಪಿಡಿಒಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ, ಗ್ರಾಮಲೆಕ್ಕಿಗರನ್ನು ಉಪನೋಂದಣಾಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಗ್ರಾಮ ಪಂಚಾಯಿತಿ ಜನರ ಎಲ್ಲಾ ದತ್ತಾಂಶ ಲಭ್ಯವಾಗುವಂತೆ ನೋಡಿಕೊಳ್ಳಲಾಗುವುದು ಎನ್ನಲಾಗಿದೆ.