ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ನವೆಂಬರ್ 17ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಕರ್ನಾಟಕದ ಲೋಕಸೇವಾ ಆಯೋಗ ಶುಕ್ರವಾರ ಬಿಡುಗಡೆ ಮಾಡಿದೆ.
ಪತ್ರಿಕೆ 1 ಮತ್ತು 2ರಲ್ಲಿ ಕ್ರಮವಾಗಿ 3 ಮತ್ತು 1 ಕೃಪಾಂಕ ನೀಡಲಾಗಿದ್ದು, 6 ಪರಿಷ್ಕೃತ ಕೀ ಉತ್ತರ ಪ್ರಕಟಿಸಲಾಗಿದೆ.