alex Certify ಗುಡ್ ನ್ಯೂಸ್: ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳ ನೇಮಕಾತಿ

ಬೆಳಗಾವಿ(ಸುವರ್ಣ ಸೌಧ): ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳ ನೇಮಕಾತಿಗೆ ಸೂಚನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ 5962 ಗ್ರಾಮ ಪಂಚಾಯಿತಿಗಳಿದ್ದು, 5294 ಪಿಡಿಒಗಳು ಕಾರ್ಯನಿರ್ವಹಿಸುತ್ತಿದ್ದಾರೆ. 727 ಹುದ್ದೆಗಳು ಖಾಲಿ ಇವೆ ಎಂಬುದಾಗಿ ಸಚಿವರು ತಿಳಿಸಿದ್ದಾರೆ.

ಸದಸ್ಯ ಕೆ. ಹರೀಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಗ್ರಾಮಪಂಚಾಯಿತಿಗಳಲ್ಲಿ ಕಾರ್ಯದರ್ಶಿ ಗ್ರೇಡ್-1 635 ಹುದ್ದೆಗಳು ಮತ್ತು ಕಾರ್ಯದರ್ಶಿ ಗ್ರೇಡ್-2 956 ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ಭರ್ತಿಮಾಡಿಕೊಳ್ಳಲು ಜಿಪಂ ಉಪಕಾರ್ಯದರ್ಶಿಗಳು ನೇಮಕಾತಿ ಪ್ರಾಧಿಕಾರವಾಗಿರುತ್ತಾರೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಈ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದಿಂದ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...