ಮಂಗಳೂರು: ಸಿಡಿಲಿನ ಆರ್ಭಟದ ವೇಳೆಯಲ್ಲಿ ಕಂಪ್ಯೂಟರ್ ಸ್ವಿಚ್ ಆಫ್ ಮಾಡಲು ಹೋದ ಪಿಡಿಒ ಸಿಡಿಲಾಘಾತದಿಂದಾಗಿ ಅಸ್ವಸ್ಥಗೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಸಮೀಪದ ಬನ್ನೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಸಂಜೆ ಘಟನೆ ನಡೆದಿದೆ. ಬನ್ನೂರು ಗ್ರಾಮ ಪಂಚಾಯಿತಿ ಪಿಡಿಒ ಚಿತ್ರಾವತಿ ಅವರು ಕಂಪ್ಯೂಟರ್ ಸ್ವಿಚ್ ಆಫ್ ಮಾಡುವ ಸಂದರ್ಭದಲ್ಲಿ ಸಿಡಿಲು ಬಡಿದಿದೆ. ಅಸ್ವಸ್ಥರಾಗಿ ಕುಸಿದು ಬಿದ್ದ ಅವರನ್ನು ಕೂಡಲೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.