ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಪಿಡಿಒ ನಿರಂಜನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ರೆಸ್ಟೋರೆಂಟ್ ಜನರಲ್ ಲೈಸೆನ್ಸ್ ನವೀಕರಿಸಲು 5 ಲಕ್ಷ ರೂಪಾಯಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದು, 3.5 ಲಕ್ಷ ರೂಪಾಯಿ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ನಿರಂಜನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಪಿಡಿಒ ನಿರಂಜನ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.