
ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ನಡೆಸಿದ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಲೋಕಸೇವಾ ಆಯೋಗ(KPSC) ಪ್ರಕಟಿಸಿದೆ.
ನವೆಂಬರ್ 17ರಂದು ಪಿಡಿಒ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಸಲಾಗಿತ್ತು. ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ ನಲ್ಲಿ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ನವೆಂಬರ್ 26ರಂದು ಸಂಜೆ 5:30ರ ಒಳಗೆ ಅಂಚೆಯ ಮೂಲಕ ಪರೀಕ್ಷಾ ನಿಯಂತ್ರಕರಿಗೆ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.