ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ಭಾನುವಾರ ಪರೀಕ್ಷೆ ನಡೆಯಲಿದೆ.
ಕರ್ನಾಟಕ ಲೋಕಸೇವಾ ಆಯೋಗ(KPSC) ವತಿಯಿಂದ ನಡೆಸುತ್ತಿರುವ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗೆ 3,86,099 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 30 ಜಿಲ್ಲೆಗಳಲ್ಲಿ, 26 ತಾಲ್ಲೂಕು ಕೇಂದ್ರಗಳಲ್ಲಿ 1035 ಉಪ ಕೇಂದ್ರಗಳಲ್ಲಿ ಡಿಸೆಂಬರ್ 8ರಂದು ಬೆಳಗ್ಗೆ 10 ರಿಂದ 12 ಗಂಟೆಯವರೆಗೆ ಪತ್ರಿಕೆ -1, ಮಧ್ಯಾಹ್ನ 2ರಿಂದ ಸಂಜೆ 4 ಗಂಟೆಯವರೆಗೆ ಪತ್ರಿಕೆ -2ರ ಪರೀಕ್ಷೆ ನಡೆಯಲಿದೆ.
ಡಿಸೆಂಬರ್ 7 ರಂದು ಶನಿವಾರ ಕಡ್ಡಾಯ ಕನ್ನಡ ಪರೀಕ್ಷೆಗೆ 2,90,018 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ.