alex Certify ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: KPSC ಯಿಂದ ನೇಮಕಾತಿ ಸುಗ್ಗಿ: 247 PDO ಸೇರಿ 734 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: KPSC ಯಿಂದ ನೇಮಕಾತಿ ಸುಗ್ಗಿ: 247 PDO ಸೇರಿ 734 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು: ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಲೋಕಸೇವಾ ಆಯೋಗ ಸಿಹಿ ಸುದ್ದಿ ನೀಡಿದೆ. ಪಿಡಿಒ ಸೇರಿದಂತೆ ವಿವಿಧ ಇಲಾಖೆಗಳ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 247 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ವಿವಿಧ ಇಲಾಖೆಗಳ 400ಕ್ಕೂ ಅಧಿಕ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಶುಕ್ರವಾರ ಅಧಿ ಸೂಚನೆ ಹೊರಡಿಸಲಾಗಿದೆ.

ಕಲ್ಯಾಣ ಕರ್ನಾಟಕದ 97 ಹುದ್ದೆಗಳು ಸೇರಿದಂತೆ ಒಟ್ಟು 247 ಪಿಡಿಒ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅಂಗೀಕೃತ ವಿವಿಗಳಿಂದ ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದಾರೆ. ಏಪ್ರಿಲ್ 15 ರಿಂದ ಮೇ 15ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಜಲಸಂಪನ್ಮೂಲ ಇಲಾಖೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಪೌರಾಡಳಿತ ನಿರ್ದೇಶನಾಲಯ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 400ಕ್ಕೂ ಅಧಿಕ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಲಾಗಿದೆ. ಏಪ್ರಿಲ್ 29 ರಿಂದ ಮೇ 28 ರವರೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ ಗಮನಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...