ವಿಜಯಪುರ: 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಹುಣಶ್ಯಾಳ ಗ್ರಾಮದ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪಿಡಿಒ ಸಂಗಮೇಶ್ ಬಲೆಗೆ ಬಿದ್ದವರು ಎಂದು ಹೇಳಲಾಗಿದೆ. ಲಂಚ ಸ್ವೀಕರಿಸುತ್ತಿದ್ದ ಸಂಗಮೇಶ್ ಅವರನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಡಿ.ವೈ.ಎಸ್.ಪಿ. ಸುರೇಶ್ ರೆಡ್ಡಿ, ಇನ್ಸ್ ಪೆಕ್ಟರ್ ಆನಂದ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.