ಕೊಲ್ಕತ್ತಾ: ಪೆಗಾಸಸ್ ಸ್ಪೈವೇರ್ ಮೂಲಕ ಗೂಢಚಾರಿಕೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರ ತನಿಖಾ ಸಮಿತಿಯನ್ನು ರಚಿಸಿದೆ.
ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸೇರಿದಂತೆ ಹಲವಾರು ನಾಯಕರ ಫೋನ್ ಕದ್ದಾಲಿಕೆ ಮಾಡಲಾಗಿದೆ. ಪೆಗಾಸಸ್ ಮೂಲಕ ಗೂಢಚಾರಿಕೆ ನಡೆಸಿದ್ದಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಮತಾ ಬ್ಯಾನರ್ಜಿ. ಕೇಂದ್ರ ಸರ್ಕಾರ ತನಿಖಾ ಆಯೋಗ ರಚಿಸುತ್ತದೆ ಅಥವಾ ಕೋರ್ಟ್ ನಿಗಾದಲ್ಲಿ ತನಿಖೆ ನಡೆಯಬಹುದೆಂದು ನಾವು ನಿರೀಕ್ಷಿಸಿದ್ದೆವು. ಆದರೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ತನಿಖಾ ಸಮಿತಿ ರಚಿಸಲಾಗಿದೆ ಎಂದು ಹೇಳಿದ್ದಾರೆ.
ಕೊಲ್ಕತ್ತಾ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಜ್ಯೋತಿರ್ಮಯಿ ಭಟ್ಟಾಚಾರ್ಯ ಮತ್ತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಂ.ಬಿ. ಲಕೂರ್ ಅವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ.