ಬೆಂಗಳೂರು: ಪೆನ್ ಡ್ರೈವ್ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಿಯೋ ಬಿಡುಗಡೆ ವಿಚಾರವಾಗಿ ಡಿಸಿಎಂ ವಿರುದ್ಧದ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಸಾಕ್ಷಿ ಕೇಳಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪೆನ್ ಡ್ರೈವ್ ಕೇಸ್ ನಲ್ಲಿ ಎಸ್ಐಟಿ ಅಧಿಕಾರಿಗಳು 7-8 ಆರೋಪಿಗಳನ್ನು ಬಂಧಿಸಿದ್ದಾರೆ. ಯಾವ ಸಾಕ್ಷಿ ಆಧಾರದ ಮೇಲೆ ಕರೆದುಕೊಂಡು ಬಂಧಿದ್ದಾರೆ? ಎಂದು ಪ್ರಶ್ನಿಸಿದರು.
ಮೊನ್ನೆ ಮಾಧ್ಯಮಗಳಲ್ಲಿ ಬಿಡುಗಡೆಯಾದ ಸಂಭಾಷಣೆ ಇದೆ. ದೇವರಾಜೇಗೌಡ, ಶಿವರಾಮೇಗೌಡ, ಡಿ.ಕೆ ಸಂಭಾಷಣೆ ಇದೆ. ಡಿ.ಕೆ.ಶಿವಕುಮಾರ್ ಅರ್ಧ ನಿಮಿಷ ಮಾತನಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಅರ್ಧ ನಿಮಿಷ ಮಾತನಾಡಿರುವುದೇ ಪ್ರಮುಖ ಅಲ್ವಾ? ಡಿಸಿಎಂ ಡಿ.ಕೆ.ಏನು ಮಾಹಿತಿ ಇದೆ ತಗೊಂಡು ಬಾ ಎಂದಿದ್ದಾರೆ. ಇದಕ್ಕಿಂತಲೂ ಸಿಎಂ ಗೆ ಸಾಕ್ಷಿ ಬೇಕಾ? ಎಂದು ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.