alex Certify ‘ಪೆನ್ ಡ್ರೈವ್’ ಪ್ರಕರಣ: ಎಸ್ಐಟಿ ಪರ ವಾದ ಮಂಡಿಸಲು ಜೈನಾ ಕೊಠಾರಿ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪೆನ್ ಡ್ರೈವ್’ ಪ್ರಕರಣ: ಎಸ್ಐಟಿ ಪರ ವಾದ ಮಂಡಿಸಲು ಜೈನಾ ಕೊಠಾರಿ ನೇಮಕ

Activist Spotlight: Jayna Kothari — GiveOut

ಹಾಸನ ಸಂಸದ ಪ್ರಜ್ವಲ್ ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣದ ‘ಪೆನ್ ಡ್ರೈವ್’ ಈಗ ರಾಜ್ಯ ಮಾತ್ರವಲ್ಲದ ರಾಷ್ಟ್ರಮಟ್ಟದಲ್ಲೂ ದೊಡ್ಡ ಸದ್ದು ಮಾಡುತ್ತಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಈಗಾಗಲೇ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದರ ಮಧ್ಯೆ ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ರಾಜ್ಯ ಕಾನೂನು ಇಲಾಖೆ, ಈ ಪ್ರಕರಣದಲ್ಲಿ ಎಸ್ಐಟಿ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ಸುಪ್ರೀಂ ಕೋರ್ಟ್ ವಕೀಲೆ ಜೈನಾ ಕೊಠಾರಿ ಮತ್ತು ವಕೀಲ ಅಶೋಕ್ ನಾಯಕ್ ಅವರನ್ನು ಹೆಚ್ಚುವರಿ ವಿಶೇಷ ಅಭಿಯೋಜಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಈ ಇಬ್ಬರನ್ನು ನೇಮಕ ಮಾಡಲಾಗಿದೆ ಎಂದು ಕಾನೂನು ಇಲಾಖೆ ತನ್ನ ಆದೇಶ ಪತ್ರದಲ್ಲಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...