ನವದೆಹಲಿ: ಪೆನ್ ಡ್ರೈವ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ವಕೀಲ ದೇವರಾಜೇಗೌಡ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿಯಾಗಿದ್ದಾರೆ.
ಜೈಲಿನಿಂದ ಬಿಡುಗಡೆಯಾದ ಬಳಿಕ ಇದೇ ಮೊದಲ ಬಾರಿಗೆ ನವದೆಹಲಿಯಲ್ಲಿ ದೇವರಾಜೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದು, ಪೆನ್ ಡ್ರೈವ್ ಬಗ್ಗೆ ಚರ್ಚೆ ನಡೆಸಿದ್ದಾರೆ.
ಭೇಟಿ ಬಳಿ ಮಾತನಾಡಿದ ದೇವರಾಜೇಗೌಡ, ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದೇನೆ. ಪೆನ್ ಡ್ರೈವ್ ಹಂಚಿಕೆಯಲ್ಲಿ ನನ್ನ ಪಾತ್ರವಿಲ್ಲ ಎಂದು ತಿಳಿಸಿದರು.
ನಾನು ಯಾವತ್ತೂ ದೇವೇಗೌಡರ ವಿರುದ್ಧ ಮಾತನಾಡಿಲ್ಲ. ರೇವಣ್ಣ ವಿರುದ್ಧ ಅಲ್ಲ, ಅವರ ಕೆಟ್ಟ ಗುಣಗಳ ವಿರುದ್ಧ ಹೋರಾಟ ಮಾಡಿದ್ದೇನೆ. ಈಗ ರೇವಣ್ಣ ಅವರಿಗೂ ಪಶ್ಚಾತ್ತಾಪವಾಗಿದೆ. ಸಾರ್ವಜನಿಕವಾಗಿ ಮರ್ಯಾದೆ ಹೋಗಿದೆ ಎಂದಿದ್ದಾರೆ. ಎಸ್ ಐಟಿ ರಚನೆಯಾಗಿ ತನಿಖೆ ನಡೆಯುತ್ತಿದೆ. ಯಾರು ಪೆನ್ ಡ್ರೈವ್ ಹಂಚಿಕೆ ಮಾಡಿದ್ದು ಎಂದು ಪೆನ್ ಡ್ರೈವ್ ನಲ್ಲಿ ಗೊತ್ತಾಗಿದೆ. ಇದರಲ್ಲಿ ನನ್ನ ಪಾತ್ರವಿಲ್ಲ ಎಂದು ಹೇಳಿದರು.