ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ಗೌಡ , ಚೇತನ್ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು, ವಿಚಾರಣೆ ನಡೆಸಿದ ಕೋರ್ಟ್ ನವೀನ್ ಗೌಡ , ಚೇತನ್ ಗೆ 14 ದಿನ ನ್ಯಾಯಾಂಗ ಬಂಧನ ಆದೇಶ ಹೊರಡಿಸಿದೆ.
ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಏ.23 ರಂದು ಹಾಸನದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆದಿದ್ದಾರೆ.