ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ಗೌಡ , ಚೇತನ್ ರನ್ನು ಎಸ್ ಐ ಟಿ ವಶಕ್ಕೆ ಪಡೆದಿದೆ.
ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯಿದ್ದ ಕಾರಣಕ್ಕೆ ಹೈಕೋರ್ಟ್ ಗೆ ಬಂದಿದ್ದ ಇಬ್ಬರನ್ನು ಎಸ್ ಐ ಟಿ ವಶಕ್ಕೆ ಪಡೆದಿದೆ. ವಿಚಾರಣೆ ಮುಗಿಸಿ ಹೈಕೋರ್ಟ್ ನಿಂದ ಹೊರಗೆ ಬರುತ್ತಿದ್ದಂತೆ ನವೀನ್ ಗೌಡ , ಚೇತನ್ ರನ್ನು ಎಸ್ ಐ ಟಿ ವಶಕ್ಕೆ ಪಡೆದಿದೆ.
ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಏ.23 ರಂದು ಹಾಸನದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಸದ್ಯದಲ್ಲೇ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆಯಲಿದ್ದಾರೆ.