ಬಾಗಲಕೋಟೆ: ಅಪ್ರಾಪ್ತ ತಮ್ಮನಿಗೆ ಬೈಕ್ ನೀಡಿದ ಅಣ್ಣನಿಗೆ 25,000 ರೂ. ದಂಡ ವಿಧಿಸಿ ಬಾಗಲಕೋಟೆ ಜಿಲ್ಲೆ ಜಮಖಂಡಿ ಜೆ.ಎಂ.ಎಫ್.ಸಿ. ಕೋರ್ಟ್ ಆದೇಶಿಸಿದೆ.
ಅಪ್ರಾಪ್ತ ತಮ್ಮನಿಗೆ ಬೈಕ್ ನೀಡಿದ್ದ ಅಣ್ಣ ಸಚಿನ್ ರಮೇಶ್ ರಾಥೋಡ್ ಗೆ 25,000 ರೂ. ದಂಡ ವಿಧಿಸಲಾಗಿದೆ. ಸಚಿನ್ ಅಪ್ರಾಪ್ತ ಸಹೋದರನಿಗೆ ಬೈಕ್ ಚಾಲನೆ ಮಾಡಲು ನೀಡಿದ್ದು, ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ ಆರೋಪದಡಿ ಕೇಸು ದಾಖಲಿಸಲಾಗಿತ್ತು.
ಜಮಖಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಮಖಂಡಿಯ ಜೆ.ಎಂ.ಎಫ್.ಸಿ. ನ್ಯಾಯಾಲಯ 25 ಸಾವಿರ ರೂ. ಆದೇಶಿಸಿದೆ.