ಬೆಂಗಳೂರು: ನಿವೃತ್ತ ನೌಕರರು ಮತ್ತು ಕುಟುಂಬ ಪಿಂಚಣಿದಾರರ ಸಮಸ್ಯೆಗಳ ಪರಿಹಾರಕ್ಕಾಗಿ ಸೆಪ್ಟೆಂಬರ್ 5 ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ ನ ಕೆಜಿಎಸ್ ಕ್ಲಬ್ ಸಭಾಂಗಣದಲ್ಲಿ ಪಿಂಚಣಿ ಅದಾಲತ್ ಆಯೋಜಿಸಲಾಗಿದೆ.
ನಿವೃತ್ತ ನೌಕರರು ಮತ್ತು ಕುಟುಂಬ ಪಿಂಚಣಿದಾರರು ತಮ್ಮ ಪಿಂಚಣಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಬ್ಬನ್ ಪಾರ್ಕ್ ನಲ್ಲಿರುವ ಸಂಘದ ಕೇಂದ್ರ ಕಚೇರಿಗೆ ಸೆಪ್ಟಂಬರ್ 2ರೊಳಗೆ ಕಳುಹಿಸಿಕೊಡಬೇಕು. ಮತ್ತು ಸೆಪ್ಟೆಂಬರ್ 5 ರಂದು ನಡೆಯುವ ಪಿಂಚಣಿ ಅದಾಲತ್ ನಲ್ಲಿ ಭಾಗವಹಿಸಬೇಕು ಎಂದು ಸಂಘದ ಅಧ್ಯಕ್ಷ ಡಾ. ಎಲ್. ಬೈರಪ್ಪ ತಿಳಿಸಿದ್ದಾರೆ.