ಬೆಂಗಳೂರು : ರಾಜ್ಯ ಸರ್ಕಾರಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಸಾಮಾಜಿಕ ಭದ್ರತಾ ಪಿಂಚಣಿ ಫಲಾನುಭವಿಗಳಿಗೆ ತ್ವರಿತಗತಿಯಲ್ಲಿ ಪಾವತಿ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಪ್ರಕ್ರಿಯೆ ಪೂರ್ಣಗೊಳಿಸಲು ವೇಳಾಪಟ್ಟಿಯನ್ನು ಸಿದ್ಧಪಡಿಸಿ, ನಿರ್ಧಿಷ್ಟ ಅವಧಿಯೊಳಗೆ ಪಾವತಿ ಮಾಡಲು ಆದ್ಯತೆ ನೀಡಲಾಗಿದೆ.
ಸರ್ಕಾರದ ಫಲಾನುಭವಿ ಆಧಾರಿತ ಯೋಜನೆಗಳನ್ನು ತ್ವರಿತಗತಿಯಲ್ಲಿ ಫಲಾನುಭವಿಗಳಿಗೆ ತಲುಪಿಸಲು, ಪ್ರತಿ ಮಾಸಿಕದ ಕೊನೆಯಲ್ಲಿ ಖಜಾನೆಗಳಲ್ಲಿ ಕೆಲಸದ ಒತ್ತಡಗಳನ್ನು ಕಡಿಮೆಗೊಳಿಸಲು ಮತ್ತು ಹಣ ಸಂದಾಯ ಮಾಡುವುದಕ್ಕೆ ವ್ಯವಸ್ಥೆ ಮಾಡುವ ಪೂರ್ವದಲ್ಲಿ, ಖಜಾನಗಳಲ್ಲಿ ಬಿಲ್ಲುಗಳನ್ನು ಪರಿಶೋಧನೆ ಮಾಡಲು ಅನುಕೂಲವಾಗುವ ದೃಷ್ಠಿಯಿಂದ ಈ ಕೆಳಕಂಡ ಯೋಜನೆಗಳಿಗೆ ಸಂಬಂಧಪಟ್ಟ ಹಣ ಸೆಳೆಯುವ ಮತ್ತು ಬಟವಾಡ ಮಾಡುವ ಅಧಿಕಾರಿಗಳು ಈ ಕೆಳಕಂಡಂತ ನಮೂದಿಸಿರುವ ವೇಳಾಪಟ್ಟಿಯನ್ವಯ ನಿಗಧಿತ ಅವಧಿಯೊಳಗೆ ಪ್ರಕ್ರಿಯೆ ಪೂರ್ಣಗೊಳಿಸಿ ಖಜಾನಗಳಿಗೆ ಬಿಲ್ಲು ಸಲ್ಲಿಸಿ ಪಾವತಿ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ.
ಫಲಾನುಭವಿಗಳಿಗೆ ತ್ವರಿತಗತಿಯಲ್ಲಿ ಪಾವತಿ ಮಾಡಲು ಮತ್ತು ಡಿ.ಡಿ.ಓ, ಡಿ.ಬಿ.ಟಿ ಸಲ್ ಮತ್ತು ಖಜಾನೆಗಳಿಗೆ ಯಾವುದಾದರೂ ತಾಂತ್ರಿಕ /ಆಡಳಿತಾತ್ಮಕ ಸಮಸ್ಯೆ ಬಗೆಹರಿಸಲು ಮತ್ತು ಪ್ರತಿ ಹಂತದಲ್ಲೂ ಸಮನ್ವಯೀಕರಣ ಸುಲಭಗೊಳಿಸಲು ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿರುವ, ಮಾಸಿಕವಾಗಿ ಪಾವತಿಸುವ ಗೃಹ ಲಕ್ಷ್ಮಿ, ಅನ್ನ ಭಾಗ್ಯ ಮತ್ತ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ಹಂತ ಹಂತವಾಗಿ ಪಾವತಿ ಮಾಡಲು ವೇಳಾಪಟ್ಟಿಯೊಂದಿಗೆ ನಿರ್ಧಿಷ್ಟ ವೇಳೆಯೊಳಗೆ ಸೂಚಿಸಲು ಕೋರಲಾಗಿದೆ.