
ಬೆಂಗಳೂರು: ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಸಿಹಿಸುದ್ದಿ ನೀಡಲಾಗಿದೆ.
ಕಂದಾಯ ಸಚಿವ ಆರ್. ಅಶೋಕ್ ಈ ಕುರಿತಾಗಿ ಮಾಹಿತಿ ನೀಡಿದ್ದು, ಮಾಸಾಶನ ಪಡೆಯುವ ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಅಂಚೆ ಕಚೇರಿಯಿಂದ ಹಣ ಪಾವತಿ ವಿಳಂಬವಾಗುತ್ತಿದೆ ಎಂಬ ದೂರುಗಳು ಬಂದಿವೆ. ಹೀಗಾಗಿ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಡಿಸೆಂಬರ್ ನಲ್ಲಿ ಉಡುಪಿ ಜಿಲ್ಲೆಯಲ್ಲಿ ಚಾಲನೆ ನಿಡಲಾಗುತ್ತದೆ. ಬೆಳೆವಿಮೆ ಹಣವನ್ನು ಕೂಡ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.