ಬೆಂಗಳೂರು: ಸಾಮಾಜಿಕ ಭದ್ರತಾ ಯೋಜನೆಯ ಮಾಸಾಶನಗಳನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
ಸಾಮಾಜಿಕ ಭದ್ರತಾ ಯೋಜನೆಗಳಡಿ ನೀಡಲಾಗುತ್ತಿರುವ ಮಾಸಾಶನವನ್ನು ಹೆಚ್ಚಳ ಮಾಡಲಾಗಿದೆ. ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ತೀರ್ಮಾನ ಕೈಗೊಂಡಿದ್ದರು.
ಅವರು ಮುಖ್ಯಮಂತ್ರಿಯಾದ ನಂತರ ಮೊದಲ ಸಂಪುಟ ಸಭೆಯಲ್ಲಿ ಮಾಸಾಶನ 200 ರೂಪಾಯಿ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದ್ದು, ಇಂದು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ. ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ವೇತನ, ಸೇರಿದಂತೆ ವಿವಿಧ ಯೋಜನೆ ಫಲಾನುಭವಿಗಳ ಮಾಸಾಶನ ಹೆಚ್ಚಳ ಮಾಡಲಾಗಿದೆ.