ಶಿವಮೊಗ್ಗ: ಕಾರ್ಮಿಕ ಇಲಾಖೆಯಿಂದ ಕೇಂದ್ರ ಸರ್ಕಾರದ ಯೋಜನೆಗಳಾದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್‍ಧನ್ ಯೋಜನೆ ಎನ್.ಪಿ.ಎಸ್. ಹಾಗೂ ಎನ್.ಪಿ.ಎನ್. ಟ್ರೇಡರ್ಸ್ ಯೋಜನೆಗಳಡಿ ನೋಂದಣಿಗೆ ಮಾರ್ಚ್ 7 ರಿಂದ 15 ರವರೆಗೆ ಪಿಂಚಣಿ ಸಪ್ತಾಹ ಹಮ್ಮಿಕೊಳ್ಳಲಾಗಿದೆ.
ಗೃಹ ಆಧಾರಿತ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಬಿಸಿಊಟ ಸಿದ್ಧಪಡಿಸುವವರು, ಹಮಾಲಿಗಳು, ಇಟ್ಟಿಗೆ ಭಟ್ಟಿಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸದವರು, ಅಗಸರು, ರಿಕ್ಷಾ ಚಾಲಕರು, ಭೂ ರಹಿತಾ ಕಾರ್ಮಿಕರು, ಧ್ವನಿ ಮತ್ತು ದೃಶ್ಯ ಕಾರ್ಮಿಕರು ಮತ್ತು ಇತರೆ ವೃತ್ತಿ ನಿರ್ವಹಿಸುತ್ತಿರುವ ಅಸಂಘಟಿತ ಕಾರ್ಮಿಕರು ನೋಂದಾಯಿಸಿಕೊಳ್ಳಬಹುದಾಗಿದೆ.
ಕೇಂದ್ರ ಸರ್ಕಾರವು ಚಂದಾದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಿಂಚಣಿ ಖಾತೆಗೆ ಪಾತಿಸುತ್ತದೆ. ಫಲಾನುಭವಿಯ 60 ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ 3 ಸಾವಿರ ರೂ. ಖಚಿತ ಕನಿಷ್ಠ ಪಿಂಚಣಿ ಪಡೆಯಬಹುದಾಗಿದೆ.
ಅರ್ಹ 18 ರಿಂದ 40 ವರ್ಷದೊಳಗಿರುವ ಮತ್ತು ಮಾಸಿಕ ವೇತನ 15,000 ರೂ.ಗಳಿಗಿಂತ ಕಡಿಮೆ ಇರುವ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು ಹತ್ತಿರದ ‘ಕಾಮನ್ ಸರ್ವೀಸ್ ಸೆಂಟರ್ (ಸಿ.ಎಸ್.ಸಿ)” ಗಳಲ್ಲಿ ನೋಂದಣಿ ಮಾಡಿಸಿಕೊಳ್ಳುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳ ಕಚೇರಿ, ದೂ.ಸಂ.: 08182-248940 ನ್ನು ಸಂಪರ್ಕಿಸುವುದು.