alex Certify ಪ್ರತಿ ತಿಂಗಳು ಖಾತೆಗೆ 3 ಸಾವಿರ ರೂ. ಜಮಾ: ಪಿಂಚಣಿ ಯೋಜನೆ ಬಗ್ಗೆ ಜಾಗೃತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿ ತಿಂಗಳು ಖಾತೆಗೆ 3 ಸಾವಿರ ರೂ. ಜಮಾ: ಪಿಂಚಣಿ ಯೋಜನೆ ಬಗ್ಗೆ ಜಾಗೃತಿ

ಮಡಿಕೇರಿ: ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಅಸಂಘಟಿತ ವಲಯದ ಕಾರ್ಮಿಕರಿಗೆ ಪಿಂಚಣಿ ಯೋಜನೆಯ ಜಾಗೃತಿ ಅಭಿಯಾನಕ್ಕೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಜಿನರಾಳಕರ ಭೀಮರಾವ್ ಲಗಮಪ್ಪ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ತಾಲ್ಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ ಇತರರು ಚಾಲನೆ ನೀಡಿದರು.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಾಗೃತಿ ವಾಹನಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಮಾತನಾಡಿ, ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಪಿಂಚಣಿ ಯೋಜನೆ ಅರ್ಹರಿಗೆ ತಲುಪುವಂತಾಗಬೇಕು. ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸುವಂತೆ ತಿಳಿಸಿದರು.

ದೇಶದ ಅರ್ಧದಷ್ಟು ಆದಾಯವು ಅಸಂಘಟಿತ ವಲಯದ 42 ಕೋಟಿ ಕಾರ್ಮಿಕರಿಂದ ಉತ್ಪಾದನೆಯಾಗುತ್ತಿದೆ. ದೈನಂದಿನ ಜೀವನದಲ್ಲಿ ಗೃಹ ಆಧಾರಿತ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಬಿಸಿಯೂಟ ಸಿದ್ಧ್ದಪಡಿಸುವವರು, ಇಟ್ಟಿಗೆ  ಭಟ್ಟಿ ಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸದವರು, ಅಗಸರು, ರಿಕ್ಷಾ ಚಾಲಕರು, ಭೂರಹಿತ ಕಾರ್ಮಿಕರು, ಸ್ವಯಂ ಉದ್ಯೋಗಿಗಳು, ಕೃಷಿ ಮತ್ತು ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ, ಚರ್ಮೋದ್ಯಮ, ದ್ವನಿ ಮತ್ತು ದೃಶ್ಯ ಕಾರ್ಮಿಕರು ಮತ್ತು ಇದೇ ರೀತಿಯ ಇತರೆ ಉದ್ಯೋಗಗಳ ಕೆಲಸಗಾರರು ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಸವಲತ್ತುಗಳು ತಲುಪುವಂತಾಗಬೇಕು ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಸರ್ಕಾರವು ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ (ಪಿ.ಎಂ.-ಎಸ್.ವೈ.ಎಂ) ಎಂಬ ಮಹತ್ವಾಕಾಂಕ್ಷಿ ವಂತಿಗೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ ಎಂದರು.

ಕಾರ್ಮಿಕರು ಅಸಂಘಟಿತ ವಲಯದ ಕಾರ್ಮಿಕರಾಗಿದ್ದು, 18 ರಿಂಧ 40 ವರ್ಷದೊಳಗಿರಬೇಕು. ಅವರ ಮಾಸಿಕ ಆದಾಯ ರೂ. 1,000 ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಅವರು ಆದಾಯ ತೆರಿಗೆ, ಇಎಸ್‍ಐ, ಪಿ.ಫ್, ಎನ್‍ಪಿಎಸ್ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರಬಾರದು ಎಂದರು.

ಫಲಾನುಭವಿಗಳ ನೋಂದಣಿ ವಿಧಾನಗಳು:

ಅರ್ಹ ಅಸಂಘಟಿತ ಕಾರ್ಮಿಕರು ಹತ್ತಿರದ “ಕಾಮನ್ ಸರ್ವಿಸ್ ಸೆಂಟರ್ (ಸಿ.ಎಸ್.ಸಿ) ಗಳಲ್ಲಿ ಯೋಜನೆಯಡಿ ಫಲಾನುಬವಿಗಳಾಗಿ ನೊಂದಾಯಿಸಬಹುದು. ಸಿ.ಎಸ್.ಸಿ ಗಳ ವಿವರಗಳನ್ನು ಹತ್ತಿರದ ಎಲ್.ಐ.ಸಿಗಳ ವಿವರಗಳನ್ನು ಹತ್ತಿರದ ಎಲ್.ಐ.ಸಿ ಶಾಖೆಗಳು, ಕಾರ್ಮಿಕ ಇಲಾಖೆ, ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ, ಭವಿಷ್ಯ ನಿಧಿ ಸಂಘಟನೆಯ ಕಚೇರಿಗಳು ಹಾಗೂ ಇಲಾಖೆಯ ವೆಬ್ ವಿಳಾಸಗಳು ಹಾಗೂ ವೆಬ್ ವಿಳಾಸ http://locator.csccloud.in  ಗಳಲ್ಲಿ ಪಡೆಯಬಹುದಾಗಿದೆ.

ಯೋಜನೆಯ ಸೌಲಭ್ಯ:

ಕೇಂದ್ರ ಸರ್ಕಾರವು ಚಂದಾದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಿಂಚಣಿ ಖಾತೆಗೆ ಫಲಾನುಭವಿಯ ವಯಸ್ಸು 60 ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ 3 ಸಾವಿರ ರೂ  ಖಚಿತ ಕನಿಷ್ಟ ಮಾಸಿಕ ಪಿಂಚಣಿ ಪಡೆಯಲು ಅರ್ಹರಾಗುತ್ತಾರೆ.

ಚಂದಾದಾರರು 10 ವರ್ಷದೊಳಗಾಗಿ ಯೋಜನೆಯಿಂದ ನಿರ್ಗಮಿಸಿದಲ್ಲಿ, ಅವರು ಪಾವತಿಸಿರುವ ವಂತಿಕೆಯನ್ನು ಮಾತ್ರ ಆ ಅವಧಿಗೆ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿಯೊಂದಿಗೆ ಹಿಂತಿರುಗಿಸಲಾಗುತ್ತದೆ. 10 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ನಂತರ ನಿರ್ಗಮಿಸಿದಲ್ಲಿ ಅವರು ಪಾವತಿಸಿದ ವಂತಿಕೆಯೊಂದಿಗೆ ಪಿಂಚಣಿ ಖಾತೆಗೆ ಜಮೆಯಾಗಿರುವ ಬಡ್ಡಿ ಅಥವಾ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿ ಇವುಗಳಲ್ಲಿ ಯಾವುದು ಹೆಚ್ಚೋ ಅದನ್ನು ಪಾವತಿಸಲಾಗುವುದು. ಫಲಾನುಭವಿಯ ನಿರಂತರವಾಗಿ ವಂತಿಕೆಯನ್ನು ಪಾವತಿಸಿದ್ದು, ಅವರು 60 ವರ್ಷದ ಒಳಗಾಗಿ ಮೃತಪಟ್ಟಲ್ಲಿ/ ಶಾಶ್ವತ ಅಂಗ ನ್ಯೂನತೆಯಿಂದ ವಂತಿಕೆಯನ್ನು ಪಾವತಿಸಲು ಸಾಧ್ಯವಾಗದಿದ್ದಲ್ಲಿ ಅವನ/ಅವಳ ಸಂಗಾತಿಯುತದ ನಂತರ ಈ ಯೋಜನೆಗೆ ಸೇರಬಹುದಾಗಿದ್ದು, ವಂತಿಕೆಯನ್ನು ಪಾವತಿಸಿ ಮುಂದುವರಿಸಬಹುದಾಗಿ ಅಥವಾ ಅವರ ವಂತಿಕೆಯನ್ನು ಬಡ್ಡಿಯೊಂದಿಗೆ ಪಡೆಯಲು ಅರ್ಹರು.

ಪಿಂಚಣಿ ಆರಂಭಗೊಂಡ ನಂತರ ಚಂದಾದಾರರು ಮೃತಪಟ್ಟಲ್ಲಿ, ಅವರ ಪತ್ನಿ/ ಪತಿ ªಮಾತ್ರ ಪಿಂಚಂಣಿಯ ಶೇ. 50 ರಷ್ಟು ಪಿಂಚಣಿಯನ್ನು ಪಡೆಯಲು ಅರ್ಹರು. ಯೋಜನೆಯ ವಿದ್ಯುನ್ಮಾನ ಆಧಾರಿತವಾಗಿದ್ದು ಎಸ್‍ಎಂಎಸ್ ಮೂಲಕ ಎಲ್ಲಾ ವ್ಯವಹಾರಗಳ ಮಾಹಿತಿಯನ್ನು ಫಲಾನುಭವಿಗೆ  ಕಾಲ ಕಾಲಕ್ಕೆ ತಿಳಿಸಲಾಗುವುದು.

ಹೆಚ್ಚಿನ ಮಾಹಿತಿಗೆ ಸಹಾಯಕ ಕೇಂದ್ರಗಳು ಸಂಪರ್ಕಿಸ ಬೇಕಾದ ವಿಳಾಸ, ಟೋಲ್ ಫ್ರೀಕಾಲ್ ಸಂಖ್ಯೆ; 1800-267-6888, ಕಾರ್ಮಿಕ ಅಧಿಕಾರಿಗಳ ಕಚೇರಿ, ರೂ ನಂ.11, 1ನೇ ಮಹಡಿ, ಜಿಲ್ಲಾಡಳಿತ ಭವನ, ಮಡಿಕೇರಿ. ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿ, ರೂ. ನಂ.11, 1 ನೇ ಮಹಡಿ, ಜಿಲ್ಲಾಡಳಿತ ಭವನ, ಮಡಿಕೇರಿ. ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿ, ತಾಲ್ಲೂಕ ಕಚೇರಿ ಕಟ್ಟಡ, ಸೋಮವಾರಪೇಟೆ. ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿ, ವಿಜಯಾ ಬ್ಯಾಂಕ್ ಬಿಲ್ಡಿಂಗ್, ವಿರಾಜಪೇಟೆ.  ಸಮೀಪದ ಸಿ.ಎಸ್.ಸಿ ಸೆಂಟರ್ ಗಳನ್ನು ಸಂಪರ್ಕಿಸಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...