
ಬೆಂಗಳೂರು: ಮೃತ ಸರ್ಕಾರಿ ನೌಕರನ ಎರಡನೇ ಪತ್ನಿಗೆ ಕುಟುಂಬ ಪಿಂಚಣಿ ಅಧಿಕಾರ ಇಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ.
ಮೊದಲ ಪತ್ನಿಗೆ ಮಾತ್ರ ಮೃತ ಪತಿಯ ಕುಟುಂಬ ಪಿಂಚಣಿ ಅಧಿಕಾರವಿದೆ. ಪತ್ನಿ ಬದುಕಿದ್ದಾಗ ಎರಡನೇ ಮದುವೆಗೆ ಮಾನ್ಯತೆ ಇಲ್ಲ. ಹೀಗಾಗಿ ಪಿಂಚಣಿಯ ಹಕ್ಕನ್ನು ಎರಡನೇ ಪತ್ನಿ ಕೇಳುವಂತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಆದೇಶ ನೀಡಿದೆ.