ಬೆಂಗಳೂರು: ಹಿರಿಯ ನಾಗರಿಕರ ವೃದ್ಧಾಪ್ಯ ವೇತನ ಪರಿಷ್ಕರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಸುಮಾರು 36 ಲಕ್ಷ ಹಿರಿಯರಿಗೆ ಮಾಸಿಕ 200 ರೂಪಾಯಿ ಹೆಚ್ಚುವರಿಯಾಗಿ ಸಿಗಲಿದೆ. ಸಂಧ್ಯಾ ಸುರಕ್ಷಾ ಯೋಜನೆಯಡಿ ಎರಡು ಬಗೆಯ ವೃದ್ಧಾಪ್ಯ ವೇತನ ನೀಡಲಾಗುತ್ತಿದೆ. 60 ವರ್ಷ ಮೇಲ್ಪಟ್ಟವರು ಮತ್ತು 65 ವರ್ಷ ಮೇಲ್ಪಟ್ಟವರಿಗೆ ಪಿಂಚಣಿ ನೀಡಲಾಗುತ್ತಿದೆ.
ರಾಜ್ಯ ಸರ್ಕಾರ 60 ವರ್ಷ ಮೇಲ್ಪಟ್ಟವರಿಗೆ 1000 ರೂ. ನೀಡುತ್ತಿದೆ. ಕೇಂದ್ರ ಸರ್ಕಾರ 65 ವರ್ಷ ಮೇಲ್ಪಟ್ಟವರಿಗೆ 600 ರೂ. ನೀಡುತ್ತಿದ್ದು, ಎರಡು ಯೋಜನೆಗಳಿಗೆ ಅನ್ವಯವಾಗುವಂತೆ 200 ರೂ.ಹೆಚ್ಚುವರಿಯಾಗಿ ನೀಡಲು ಸರ್ಕಾರ ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ.