ಬೆಂಗಳೂರು: ವಿಧವಾ ವೇತನ, ವೃದ್ಧಾಪ್ಯ ವೇತನ, ವಿಕಲಚೇತನರ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ವೇತನಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿ, ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳಿಗೆ ಅಂಚೆ ಕಚೇರಿಯ ಬದಲಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ವೇತನ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಮುಂದಿನ ತಿಂಗಳು ಮುಖ್ಯಮಂತ್ರಿ ಯಡಿಯೂರಪ್ಪ ಯೋಜನೆಗೆ ಚಾಲನೆ ನೀಡಲಿದ್ದಾರೆ. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಧಾರ್ ಕಾರ್ಡ್ ನಲ್ಲಿರುವ ವಯಸ್ಸಿನ ಆಧಾರವನ್ನು ಪರಿಗಣಿಸಿ ಪಿಂಚಣಿ ನೀಡಲಾಗುತ್ತದೆ. ನಮ್ಮ ಸಾಮಾಜಿಕ ಭದ್ರತಾ ಯೋಜನೆಯಡಿ ಫಲಾನುಭವಿಗಳಿಗೆ ಪಿಂಚಣಿ ವಿಳಂಬವಾಗುತ್ತಿರುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.