ಬೆಂಗಳೂರು: ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಪ್ರವಾಸಿ ಮಾರ್ಗದರ್ಶಿ ಗಳಿಗೆ 5 ಸಾವಿರ ರೂಪಾಯಿಗಳನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಪ್ರವಾಸೋದ್ಯಮ ಇಲಾಖೆಯ ನೋಂದಾಯಿತ ಮಾರ್ಗದರ್ಶಿಗಳಿಗೆ 5 ಸಾವಿರ ರೂ. ನೀಡಲಾಗುವುದು.
ಅಬಕಾರಿ ಸನ್ನದು, ಹೆಚ್ಚುವರಿ ಸನ್ನದು ಶುಲ್ಕದ ಶೇಕಡ 50 ರಷ್ಟು ಮೊತ್ತವನ್ನು ಈಗ ಪಾವತಿಸಬೇಕು. ಉಳಿದ ಶೇಖರ 50 ರಷ್ಟು ಮೊತ್ತವನ್ನು ಡಿಸೆಂಬರ್ ನಲ್ಲಿ ಪಾವತಿಸಬೇಕಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
2021- 22 ನೇ ಆರ್ಥಿಕ ವರ್ಷದಲ್ಲಿ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್ ಗಳಿಗೆ ಆಸ್ತಿ ತೆರಿಗೆಯಲ್ಲಿ ಶೇಕಡ 50 ರಷ್ಟು ವಿನಾಯಿತಿ ನೀಡಲಾಗಿದೆ. ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಏಪ್ರಿಲ್, ಮೇ, ಜೂನ್ ತಿಂಗಳ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ. ವಿದ್ಯುತ್ ಶಕ್ತಿ ಡಿಮ್ಯಾಂಡ್ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಹೇಳಲಾಗಿದೆ.