alex Certify ಲೋಕಸಭೆ ಚುನಾವಣೆ : 85 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆ : 85 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ.!

ಬೆಂಗಳೂರು : ಲೋಕಸಭೆ ಚುನಾವಣೆ ಎದುರಿಸಲು ರಾಜ್ಯ ಸಜ್ಜಾಗಿದ್ದು, ಮತದಾರರು 28 ಸಂಸದರನ್ನು ಆಯ್ಕೆ ಮಾಡಲಿದ್ದಾರೆ. ಅದಕ್ಕಾಗಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ರಾಜ್ಯದ 28 ಕ್ಷೇತ್ರಗಳನ್ನು ಎರಡು ಭಾಗಗಳಾಗಿ ವಿಭಜಿಸಲಾಗಿದ್ದು, ತಲಾ 14 ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ 58,834 ಮತಗಟ್ಟೆಗಳಿದ್ದು, 5 ಕೋಟಿಯ 42 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ.

ದೇಶದಲ್ಲಿ 85 ವರ್ಷ ಮೀರಿದ ವಯೋಮಾನದ 81 ಲಕ್ಷಕ್ಕೂ ಅಧಿಕ ಮತದಾರರಿದ್ದು, ಅವರಿಗಾಗಿ ʼಮನೆಯಿಂದಲೇ ಮತದಾನʼ ಸೌಲಭ್ಯವನ್ನು ಚುನಾವಣಾ ಆಯೋಗ ಕಲ್ಪಿಸಿದೆ. ಜೊತೆಗೆ ಶೇ.40ಕ್ಕಿಂತಲೂ ಅಧಿಕ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೂ ಈ ಅವಕಾಶ ಕಲ್ಪಿಸಲಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...