ಜುಲೈ 15 ರಿಂದ 18 ರಿಂದ 59 ವರ್ಷದವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಕೋವಿಡ್ ಬೂಸ್ಟರ್ ಡೋಸ್ ಮಾಡಲು ತೀರ್ಮಾನಿಸಲಾಗಿದೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಈ ಕುರಿತು ಮಾಹಿತಿ ನೀಡಿದ್ದಾರೆ.
ಕೋವಿಡ್ ಬೂಸ್ಟರ್ ಡೋಸ್ ಗಳನ್ನು ಈಗಾಗಲೇ ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುತ್ತಿದ್ದು, ಇದಕ್ಕಾಗಿ ಶುಲ್ಕ ನಿಗದಿಪಡಿಸಲಾಗಿತ್ತು. ಆದರೆ ಮೂರನೇ ಡೋಸ್ ಪಡೆಯಲು ಬಹುತೇಕರು ನಿರಾಸಕ್ತಿ ತೋರಿಸುತ್ತಿದ್ದರು.
ಇದೀಗ ಕೇಂದ್ರ ಸರ್ಕಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಕೋವಿಡ್ ಬೂಸ್ಟರ್ ಡೋಸ್ ನೀಡಲು ತೀರ್ಮಾನಿಸಿದೆ.