alex Certify ಜನಸಂಖ್ಯೆ ನಿಯಂತ್ರಣಕ್ಕೆ ಸರ್ಕಾರಿ ಸೌಲಭ್ಯ ಎರಡು ಮಕ್ಕಳಿಗೆ ಸೀಮಿತಗೊಳಿಸಲು ಒತ್ತಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನಸಂಖ್ಯೆ ನಿಯಂತ್ರಣಕ್ಕೆ ಸರ್ಕಾರಿ ಸೌಲಭ್ಯ ಎರಡು ಮಕ್ಕಳಿಗೆ ಸೀಮಿತಗೊಳಿಸಲು ಒತ್ತಾಯ

ಬೆಂಗಳೂರು: ಜನಸಂಖ್ಯೆ ಸ್ಪೋಟ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಹೇಳಿದ್ದಾರೆ.

ವಿಧಾನಪರಿಷತ್ ನಲ್ಲಿ ಮಾತನಾಡಿದ ಅವರು, ಸರ್ಕಾರಿ ಸೌಲಭ್ಯವನ್ನು ಎರಡು ಮಕ್ಕಳಿಗೆ ಸೀಮಿತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಜನಸಂಖ್ಯೆ ಸ್ಪೋಟವಾಗುತ್ತಿದ್ದು, ಜನಸಂಖ್ಯೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಸರ್ಕಾರ ಕಠಿಣ ಕ್ರಮ ಕೈಗೊಂಡು ಸರ್ಕಾರಿ ಸೌಲಭ್ಯವನ್ನು ಎರಡು ಮಕ್ಕಳಿಗೆ ಸೀಮಿತಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಏನೇ ನಿಯಮಗಳನ್ನು ಜಾರಿಗೆ ತಂದರೂ ಕೂಡ ಜನಸಂಖ್ಯೆ ನಿಯಂತ್ರಣವಾಗುತ್ತಿಲ್ಲ. ಉತ್ತರಪ್ರದೇಶ ಸರ್ಕಾರ ಎರಡು ಮಕ್ಕಳಿಗಿಂತ ಹೆಚ್ಚಿನ ಮಕ್ಕಳನ್ನು ಹೊಂದಿದವರಿಗೆ ಸರಕಾರಿ ಸೌಲಭ್ಯ ಕಡಿತ ಮಾಡುವುದಾಗಿ ಹೇಳಿದ್ದು, ನಿಯಮ ಪರಿಶೀಲಿಸಿ ರಾಜ್ಯದಲ್ಲಿಯೂ ಅಂತಹ ನಿಯಮ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ನಗರಾಭಿವೃದ್ಧಿ ಸಚಿವರು ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...