ಬೆಂಗಳೂರು : ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಪ್ರತಿ ತಿಂಗಳು ‘ಜನತಾ ದರ್ಶನ’ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವ ಸಂಬಂಧ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟೆಂಬರ್, 25 ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಖ್ಯಮಂತ್ರಿ ಅವರು ಅವರು ಸೂಚನೆ ನೀಡಿರುತ್ತಾರೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟೆಂಬರ್, 25 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ‘ಜನತಾ ದರ್ಶನ’ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಆಯೋಜಿಸಿ ಸಾರ್ವಜನಿಕರಿಗೆ ಅದರ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ, ಸೆಪ್ಟೆಂಬರ್ 21 ಮತ್ತು 22 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಸಾರ್ವಜನಿಕರು ಅವರ ಲಿಖಿತ ಅಹವಾಲುಗಳನ್ನು ಅಗತ್ಯ ದಾಖಲೆಗಳ ಸಹಿತ ಜಿಲ್ಲಾಡಳಿತ ಭವನದ ನೆಲಮಹಡಿಯಲ್ಲಿರುವ ‘ಸ್ಪಂದನ ಕೇಂದ್ರ’ದಲ್ಲಿ ತೆರೆದಿರುವ ‘ಜನತಾ ದರ್ಶನ’ ಕೋಶ/ವಿಭಾಗದಲ್ಲಿ ಮನವಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಈ ದಿವಸಗಳಂದು ಸ್ವೀಕೃತವಾದ ಮನವಿಗಳನ್ನು ಕ್ರೋಡೀಕರಿಸಿ ಆಧ್ಯತೆ ಮೇರೆಗೆ ಸೆಪ್ಟೆಂಬರ್ 25 ರಂದು ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು. ಮುಂದುವರೆದು, ಸಾರ್ವಜನಿಕರು ಸೆಪ್ಟೆಂಬರ್ 25 ರಂದು ಸಹ ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.