ಬೆಂಗಳೂರು: ಕೊರೋನಾ ಸೋಂಕು ಹೆಚ್ಚಾಗುತ್ತಿದ್ದರೂ ಜನ ಎಚ್ಚೆತ್ತುಕೊಳ್ಳುತ್ತಿಲ್ಲ. ರಾಜ್ಯದ ಹಲವೆಡೆ ಜನರ ಬೇಜವಾಬ್ದಾರಿ ಮುಂದುವರೆದಿದೆ.
ತರಕಾರಿ, ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಕೆಲವೆಡೆ ಮಾಂಸ ಮದ್ಯ ಖರೀದಿಗೆ ಜನರ ನೂಕುನುಗ್ಗಲು ಉಂಟಾಗಿದೆ. ಬೆಂಗಳೂರು, ಮೈಸೂರು, ಬಳ್ಳಾರಿ, ಕಲಬುರ್ಗಿ, ಶಿವಮೊಗ್ಗ, ಹಾವೇರಿ, ಗದಗ ಸೇರಿದಂತೆ ರಾಜ್ಯದ ಹಲವೆಡೆ ಜನರ ನಿರ್ಲಕ್ಷ ಕಂಡುಬಂದಿದೆ. ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ಜನರು ರೂಲ್ಸ್ ಬ್ರೇಕ್ ಮಾಡತೊಡಗಿದ್ದಾರೆ. ಅನಗತ್ಯವಾಗಿ ರಸ್ತೆಯಲ್ಲಿ ತಿರುಗಾಡತೊಡಗಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪೊಲೀಸರು ಅಲರ್ಟ್ ಆಗಿದ್ದು, ಅನಗತ್ಯವಾಗಿ ವಾಹನಗಳನ್ನು ರಸ್ತೆಗೆ ಇಳಿಸಿದರೆ ವಶಕ್ಕೆ ಪಡೆಯಲಾಗುತ್ತದೆ. ನಿನ್ನೆ ಬೆಂಗಳೂರಿನಲ್ಲಿ ಎರಡು ಸಾವಿರಕ್ಕೂ ಹೆಚ್ಚು ವಾಹನಗಳ ಜಪ್ತಿ ಮಾಡಲಾಗಿದೆ. 500ಕ್ಕೂ ಹೆಚ್ಚು ವಾಹನ ಸವಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.