alex Certify ತಮ್ಮ ಪ್ರಾಣದ ಹಂಗು ತೊರೆದು ಹಸು ರಕ್ಷಣೆ: ಹೃದಯಸ್ಪರ್ಶಿ ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ಪ್ರಾಣದ ಹಂಗು ತೊರೆದು ಹಸು ರಕ್ಷಣೆ: ಹೃದಯಸ್ಪರ್ಶಿ ವಿಡಿಯೋ ವೈರಲ್

ಅಪಾಯದಲ್ಲಿರುವ ಪ್ರಾಣಿಗಳಿಗೆ ಕೆಲವರು ಸಹಾಯಹಸ್ತ ಚಾಚುವ ಮೂಲಕ ಮಾನವೀಯತೆ ತೋರುತ್ತಾರೆ. ಅಂತಹ ಹಲವಾರು ವಿಡಿಯೋಗಳು ಆನ್ಲೈನ್ ನಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ ಇಂಥದ್ದೇ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಮಹಾರಾಷ್ಟ್ರದ ಪನ್ವೇಲ್‌ನಲ್ಲಿ ಈ ಘಟನೆ ನಡೆದಿದೆ. ರೆಡ್ಡಿಟ್‌ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋವನ್ನು ‘ಹ್ಯೂಮನ್ಸ್ ಬೀಯಿಂಗ್ ಬ್ರೋಸ್’ ಶೀರ್ಷಿಕೆಯ ಸಬ್‌ರೆಡಿಟ್‌ನಲ್ಲಿ ಹಂಚಿಕೊಳ್ಳಲಾಗಿದೆ. ಇದರಲ್ಲಿ ಪುರುಷರ ಗುಂಪೊಂದು ಹಸುವನ್ನು ಉಳಿಸಲು ಪ್ರಯತ್ನಿಸುತ್ತಿದೆ.

ತಮ್ಮ ಸೊಂಟಕ್ಕೆ ಹಗ್ಗಗಳನ್ನು ಕಟ್ಟಿಕೊಂಡು, ಕಡಿದಾದ ಬಂಡೆಯ ಕೆಳಗೆ ಇದ್ದ ಹಸುವನ್ನು ಕೆಲವು ಸೆಕೆಂಡುಗಳ ಪ್ರಯತ್ನಗಳ ನಂತರ, ಸುರಕ್ಷಿತವಾಗಿ ಮೇಲೆ ಎಳೆದಿದ್ದಾರೆ. ತಮ್ಮ ಜೀವವನ್ನು ಪಣಕ್ಕಿಟ್ಟು ಹಸುವನ್ನು ಕಾಪಾಡಿದ್ದಾರೆ ಎಂಬ ಶೀರ್ಷಿಕೆ ನೀಡಿ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು 20,000ಕ್ಕೂ ಹೆಚ್ಚು ಲೈಕ್ಸ್ ಗಳು ಬಂದಿವೆ. ಹಾಗೂ ಟನ್ ಗಳಷ್ಟು ಪ್ರತಿಕ್ರಿಯೆಗಳ ಅಲೆಯೇ ಹರಿದುಬಂದಿದೆ. ಅಸಹಾಯಕ ಹಸುವನ್ನು ಉಳಿಸಲು ಜನರು ತಮ್ಮ ಪ್ರಾಣ ಪಣಕ್ಕಿಟ್ಟು ಕಾಪಾಡಿದ್ದಕ್ಕಾಗಿ ನೆಟ್ಟಿಗರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...