alex Certify ಜನರ ಸೇವೆಯೇ ನಮ್ಮ ಕಾಯಕ : ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಅಹವಾಲು ಸ್ವೀಕರಿಸಿದ ಡಿಸಿಎಂ ಡಿಕೆಶಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನರ ಸೇವೆಯೇ ನಮ್ಮ ಕಾಯಕ : ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಅಹವಾಲು ಸ್ವೀಕರಿಸಿದ ಡಿಸಿಎಂ ಡಿಕೆಶಿ

ಬೆಂಗಳೂರು : ಜನರ ಸೇವೆಯೇ ನಮ್ಮ ಕಾಯಕ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.ಬೆಂಗಳೂರಿನ ಯಲಹಂಕ ನ್ಯೂ ಟೌನ್’ನ ಅಂಬೇಡ್ಕರ್ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಬೃಹತ್ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ಸರ್ಕಾರ ಜನಪರ ಕಾರ್ಯಕ್ರಮಗಳ ಮೂಲಕ ಮಹತ್ವದ ಹೆಜ್ಜೆಗಳನ್ನು ಇಟ್ಟಿದ್ದು, “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಬೃಹತ್ ಜನಸ್ಪಂದನ ಕಾರ್ಯಕ್ರಮ ಇದರ ಒಂದು ಭಾಗವಾಗಿದೆ. ಈಗಾಗಲೇ ಈ ಕಾರ್ಯಕ್ರಮ ಯಶಸ್ವಿಯಾಗಿದ್ದು, ಜನರಿಗೆ ಪರಿಹಾರದ ಭರವಸೆ ನೀಡಲಾಗಿದೆ. ಬೆಂಗಳೂರು ಜನರ ಸಮಸ್ಯೆಗಳ ಪರಿಹಾರಕ್ಕೆ ಇಡೀ ಸರ್ಕಾರದ ಅಧಿಕಾರಿಗಳೊಂದಿಗೆ ನಾವು ಕಾರ್ಯನಿರ್ವಹಿಸಲಿದ್ದೇವೆ. ನಮ್ಮ ಮೇಲೆ ವಿಶ್ವಾಸವಿಟ್ಟು ರಾಜ್ಯದ ಜನತೆ ನಮ್ಮನ್ನು ಅಧಿಕಾರಕ್ಕೆ ತಂದಿದ್ದಾರೆ. ಅವರ ಋಣ ತೀರಿಸುವ ಸಮಯವಿದು. ಅದರಂತೆ ಅವರ ಸೇವೆ ಮಾಡಲು ಈ ಕಾರ್ಯಕ್ರಮ ಪೂರಕವಾಗಿದೆ. ಬೆಂಗಳೂರು ನಗರ ವ್ಯಾಪ್ತಿಯ ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡುವ ಸಂಕಲ್ಪ ಮಾಡಿದ್ದು, ಜನರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವುದು ನಮ್ಮ ಉದ್ದೇಶ ಎಂದು ತಿಳಿಸಿದರು.

ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಬೃಹತ್ ಜನಸ್ಪಂದನ ಕಾರ್ಯಕ್ರಮದಲ್ಲಿ ಇಂದು ಜನರ ಅಹವಾಲುಗಳನ್ನು ಸ್ವೀಕರಿಸಿ ಸೂಕ್ತ ಪರಿಹಾರದ ಭರವಸೆ ನೀಡುವಾಗ ಅವರಲ್ಲಿದ್ದ ನಂಬಿಕೆ, ವಿಶ್ವಾಸ ನಮ್ಮ ಕಾರ್ಯಕ್ಕೊಂದು ಅರ್ಥ ನೀಡಿದೆ. ನಮ್ಮ ಪ್ರತಿ ಹೆಜ್ಜೆಯೂ ಜನರ ಹಿತಕ್ಕಾಗಿ ಮುಡಿಪಾಗಿದ್ದು, ಇದು ನಮ್ಮ ಸರ್ಕಾರದ ಬದ್ಧತೆಯಾಗಿದೆ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...