ಕಾಳು ಮೆಣಸನ್ನು ಸಾಮಾನ್ಯವಾಗಿ ಮಸಾಲೆಯಾಗಿ ಬಳಸ್ತಾರೆ. ಆಹಾರದ ರುಚಿ ಹೆಚ್ಚಿಸುವ ಜೊತೆಗೆ ಈ ಕಾಳು ಮೆಣಸು ಆರೋಗ್ಯವರ್ಧಕವೂ ಹೌದು. ಪ್ರತಿದಿನ ಈ ಕಾಳು ಮೆಣಸನ್ನು ಸೂಕ್ತ ಪ್ರಮಾಣದಲ್ಲಿ ಸೇವನೆ ಮಾಡುವುದ್ರಿಂದ ಅನೇಕ ರೋಗಗಳು ಕಡಿಮೆಯಾಗುತ್ತವೆ.
ಕಾಳುಮೆಣಸು ಕೇವಲ ಅಡುಗೆಗೆ ರುಚಿ ನೀಡುವ ಮಸಾಲೆಯಲ್ಲ, ಇದು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಅದ್ಭುತ ಔಷಧೀಯ ಗುಣಗಳ ಕಣಜ. ಪ್ರಾಚೀನ ಆಯುರ್ವೇದದಲ್ಲಿ ಕಾಳುಮೆಣಸನ್ನು ಅನೇಕ ರೋಗಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತಿತ್ತು.
ಶೀತ-ನೆಗಡಿ : 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ. ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು, ತಲೆನೋವು ನಿಯಂತ್ರಣಕ್ಕೆ ಬರುತ್ತದೆ.
ಕಣ್ಣಿನ ಸಮಸ್ಯೆ : ಕಣ್ಣಿನ ದೋಷವಿರುವವರು ಪ್ರತಿದಿನ ಬೆಳಿಗ್ಗೆ ಕಾಳು ಮೆಣಸಿನ ಪುಡಿ ಜೊತೆ ಸಕ್ಕರೆ ಹಾಗೂ ತುಪ್ಪ ಬೆರೆಸಿ ತಿನ್ನುವುದು ಒಳ್ಳೆಯದು. ಇದು ದೃಷ್ಟಿಯನ್ನು ಚುರುಕುಗೊಳಿಸುತ್ತದೆ.
ರಕ್ತಸ್ರಾವ : ಮೂಗಿನಲ್ಲಿ ರಕ್ತ ಸೋರುತ್ತಿದ್ದರೆ ಕಾಳು ಮೆಣಸಿನ ಪುಡಿಯನ್ನು ಮೊಸರು ಹಾಗೂ ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ರಕ್ತ ಸೋರುವುದು ಕಡಿಮೆಯಾಗುತ್ತದೆ.
ಹೊಟ್ಟೆ ಸಮಸ್ಯೆ : ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿರುವವರು ಒಂದು ಗ್ರಾಂ ಕಾಳು ಮೆಣಸಿನ ಪುಡಿಗೆ ನಿಂಬೆ ರಸ ಹಾಗೂ ಶುಂಠಿ ರಸ ಬೆರೆಸಿ ಕುಡಿದ್ರೆ ಒಳ್ಳೆಯದು.
ಎಸಿಡಿಟಿ : ಹೊಟ್ಟೆ ಉಬ್ಬರ, ಹುಳಿ ತೇಗು, ಗಂಟಲು ಸೋಂಕಿದ್ದಲ್ಲಿ ಕಾಳು ಮೆಣಸಿನ ಪುಡಿಗೆ ನಿಂಬೆ ರಸ, 1/2 ಚಮಚ ಉಪ್ಪನ್ನು ನೀರಿಗೆ ಸೇರಿಸಿ ಕುಡಿಯುವುದ್ರಿಂದ ಎಸಿಡಿಟಿ ಕಡಿಮೆಯಾಗುತ್ತದೆ.
ಜೀರ್ಣಕ್ರಿಯೆಗೆ ಸಹಾಯಕ; ಕಾಳುಮೆಣಸು ಜೀರ್ಣಕ್ರಿಯೆಗೆ ಸಹಕರಿಸುತ್ತದೆ, ತೂಕ ಇಳಿಸಲು ಸಹಾಯ ಮಾಡುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ದೇಹವನ್ನು ರೋಗಗಳಿಂದ ರಕ್ಷಿಸುತ್ತವೆ. ಕೆಮ್ಮು, ಶೀತ, ಗಂಟಲು ನೋವು, ಅಸ್ತಮಾ ಮತ್ತು ಇತರ ಉಸಿರಾಟದ ತೊಂದರೆಗಳಿಗೆ ಇದು ರಾಮಬಾಣ. ಇದರಲ್ಲಿರುವ ಉರಿಯೂತ ನಿವಾರಕ ಗುಣಗಳು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತವೆ. ಕಾಳುಮೆಣಸು ಮೆದುಳಿನ ಕಾರ್ಯವನ್ನು ಸುಧಾರಿಸುತ್ತದೆ, ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಏಕಾಗ್ರತೆಯನ್ನು ವೃದ್ಧಿಸುತ್ತದೆ.
ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತೆ: ಕಾಳುಮೆಣಸು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಇದು ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಚರ್ಮದ ಸೋಂಕುಗಳನ್ನು ತಡೆಯುತ್ತದೆ.
ಕಾಳುಮೆಣಸನ್ನು ಅಡುಗೆಯಲ್ಲಿ ಮಸಾಲೆಯಾಗಿ, ಕಾಳುಮೆಣಸಿನ ಚಹಾ, ಕಷಾಯ, ಜೇನುತುಪ್ಪದೊಂದಿಗೆ ಅಥವಾ ಮಜ್ಜಿಗೆಯೊಂದಿಗೆ ಸೇವಿಸಬಹುದು. ಆದರೆ, ಕಾಳುಮೆಣಸನ್ನು ಮಿತವಾಗಿ ಬಳಸುವುದು ಉತ್ತಮ. ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿದರೆ ಹೊಟ್ಟೆ ಉರಿ, ವಾಂತಿ ಮತ್ತು ಅತಿಸಾರದಂತಹ ಸಮಸ್ಯೆಗಳು ಉಂಟಾಗಬಹುದು. ಯಾವುದೇ ಆರೋಗ್ಯ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸಿ.