ಬೆಂಗಳೂರು : ಗುತ್ತಿಗೆದಾರರ ಶೇ. 65ರಿಂದ 70ರಷ್ಟು ಬಿಲ್ ಬಿಡುಗಡೆಗೆ ಆದೇಶ ನೀಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಬೆಂಗಳೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ತನಿಖೆ ಪೆಂಡಿಂಗ್ ಇದ್ದರೂ ಬಿಲ್ ಬಿಡುಗಡೆಗೆ ಆದೇಶ ಮಾಡಿದ್ದೇವೆ. ಸೀನಿಯಾರಿಟಿ ಮೇಲೆ ಬಿಲ್ ಬಿಡುಗಡೆ ಮಾಡಿದ್ದೇವೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಾಬರಿಪಡುವ ಅಗತ್ಯವಿಲ್ಲ. ಗುತ್ತಿಗೆದಾರರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದರು,
ಗುತ್ತಿಗೆದಾರರು ಆತಂಕ ಪಡುವ ಅಗತ್ಯವಿಲ್ಲ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಡಿಸಿಎ< ಡಿ.ಕೆ.ಶಿವಕುಮಾರ್ ಹೇಳಿದರು.
ಇತ್ತೀಚೆಗೆ ಗುತ್ತಿಗೆದಾರ ನಾಗಪ್ಪ ಬಂಗಿ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯ ಕೋಟೆ ಆವರಣದಲ್ಲಿರುವ ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿತ್ತು. ರಸ್ತೆ ನಿರ್ವಹಣೆ ಬಿಲ್ ಮಂಜೂರು ಮಾಡದ ಹಿನ್ನೆಲೆಯಲ್ಲಿ ವಿಷ ಸೇವಿಸಿ ಗುತ್ತಿಗೆದಾರ ನಾಗಪ್ಪ ಬಂಗಿ ಆತ್ಮಹತ್ಯೆಗೆ ಯತ್ನಿಸಿದ್ದರು.