alex Certify 42 ಸಾವಿರ ಪೌರ ಕಾರ್ಮಿಕರ ನೌಕರಿ ಕಾಯಂ: ಸರ್ಕಾರಿ ಪೌರ ನೌಕರರು ಎಂದು ಕರೆಯಲು ತೀರ್ಮಾನ; ನೇಮಕಾತಿ ಆದೇಶ ಪತ್ರ ವಿತರಿಸಿ ಸಿಎಂ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

42 ಸಾವಿರ ಪೌರ ಕಾರ್ಮಿಕರ ನೌಕರಿ ಕಾಯಂ: ಸರ್ಕಾರಿ ಪೌರ ನೌಕರರು ಎಂದು ಕರೆಯಲು ತೀರ್ಮಾನ; ನೇಮಕಾತಿ ಆದೇಶ ಪತ್ರ ವಿತರಿಸಿ ಸಿಎಂ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ 11,133 ಪೌರ ಕಾರ್ಮಿಕರ ನೌಕರಿಯನ್ನು ಕಾಯಂಗೊಳಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಪೌರ ಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಕಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಳಗಾವಿಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು.

ಪೌರಕಾರ್ಮಿಕರಿಗೆ 2000 ರೂ. ಸಂಕಷ್ಟ ಭತ್ಯೆ :

ಆಯವ್ಯಯದಲ್ಲಿ ಪೌರಕಾರ್ಮಿಕರಿಗೆ 2000 ರೂ. ಸಂಕಷ್ಟ ಭತ್ಯೆಯನ್ನು ಅವರ ಆರೋಗ್ಯ ಹಿತರಕ್ಷಣೆಗೆ ನೀಡಲಾಯಿತು. ಪೌರಕಾರ್ಮಿಕರ ಹಿತರಕ್ಷಣೆಗಾಗಿ ಕಾನೂನನ್ನು ಬದಲಾಯಿಸಿ, ಈ ತೀರ್ಮಾನವನ್ನು ಕೈಗೊಳ್ಳುವ ಮೂಲಕ ಪೌರಕಾರ್ಮಿಕರಿಗೆ ನ್ಯಾಯ ಒದಗಿಸಲಾಗಿದೆ. ಅವರ ಗೌರವಯುತ ಜೀವನ ನಡೆಸುವ ಸಲುವಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಈ ಜಿಲ್ಲೆಯಲ್ಲಿ 309 ಕ್ಲೀನರ್ ಗಳನ್ನು, 1437 ಲೋಡರ್ಸ್ ಗಳನ್ನು ಖಾಯಂಗೊಳಿಸಲಾಗಿದೆ. ಇದೇ ರೀತಿ ಉಳಿದವರನ್ನು ನೇಮಕಾತಿ ಪ್ರಕ್ರಿಯೆ ಕೈಕೊಳ್ಳಲಾಗುವುದು. ಅಲ್ಲಿಯವರೆಗೆ ಅವರ ಸೇವಾ ದರವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡುವ ತೀರ್ಮಾನ ಸರ್ಕಾರ ಮಾಡಿದೆ ಎಂದರು.

ಪೌರ ಕಾರ್ಮಿಕರಲ್ಲ, ಪೌರ ನೌಕರರು

ಇನ್ನು ಮುಂದೆ ಪೌರ ಕಾರ್ಮಿಕರು ಎನ್ನದೇ ಸರ್ಕಾರಿ ಪೌರ ನೌಕರರು ಎಂದು ಕರೆಯಲು ತೀರ್ಮಾನಿಸಲಾಗಿದೆ. ಈ ಹೆಸರು ನಿಮಗೆ ಸ್ವಾಭಿಮಾನ, ಅಸ್ಮಿತೆಯನ್ನು ನೀಡುತ್ತದೆ ಎಂದು ಸಿಎಂ ತಿಳಿಸಿದ್ದಾರೆ.

ಪೌರ ನೌಕಕರ ಮಕ್ಕಳ ಶಿಕ್ಷಣಕ್ಕೆ ಆದ್ಯತೆ:

ಯಾವುದೇ ಕಾರಣಕ್ಕೂ ಪೌರ ನೌಕಕರ ಮಕ್ಕಳ ಶಿಕ್ಷಣಕ್ಕೆ ತಡೆಯುಂಟಾಗಬಾರದು. ಪೌರ ನೌಕರರ ಮಕ್ಕಳ ಶಿಕ್ಷಣಕ್ಕೆ ಯಾವುದೇ ಸಮಸ್ಯೆ ಬಂದರೂ ಸರ್ಕಾರ ಪರಿಹಾರ ಒದಗಿಸುತ್ತದೆ. ಅವರೂ ವಿದ್ಯಾವಂತರಾಗಿ ಎಲ್ಲರಂತೆಯೇ ಉನ್ನತ ಹುದ್ದೆಗಳಿಗೆ ಹೋಗಬೇಕು. ಈ ರೀತಿ ಸಾಮಾಜಿಕ ಬದಲಾವಣೆಯನ್ನು ತರಲಾಗುತ್ತದೆ. ಎಸ್ಸಿ, ಎಸ್ಟಿ ಜನಾಂಗಕ್ಕೆ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಈ ನಿರ್ಣಯಕ್ಕೆ ಗಟ್ಟಿಯಾಗಿ ನಿಲ್ಲಲು ಸರ್ಕಾರ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಪೌರ ನೌಕಕರ ಸೇವೆಯನ್ನು ಸರ್ಕಾರ ಗುರುತಿಸಿದೆ. ಬರುವ ದಿನಗಳಲ್ಲಿ ಪೌರನೌಕರರ ಮಕ್ಕಳಿಗೆ  ಉತ್ತಮ ವಿದ್ಯೆ ನೀಡಿ, ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕು. ಇದಕ್ಕೆ ಸರ್ಕಾರ ಎಲ್ಲ ಸಹಕಾರ ನೀಡುತ್ತದೆ ಎಂದರು.

ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ :

ಈ ವರ್ಷ ಮಾರ್ಚ್ ನಲ್ಲಿ ಪದವಿ ಪರೀಕ್ಷೆ ಬರೆಯುವ ಪೌರ ನೌಕರರ ಮಕ್ಕಳ ಸವಿವರ ಪಟ್ಟಿಯನ್ನು ನೀಡಲು ಸಂಬಂಧಪಟ್ಟ ಸಚಿವರಿಗೆ ಮುಖ್ಯಮಂತ್ರಿಗಳು ಸೂಚಿಸಿದರು. ಎಸ್ಸಿ, ಎಸ್ಟಿ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಶೇಷ ತರಬೇತಿಯನ್ನು ನೀಡುವಂತೆ, ಪೌರನೌಕರರ ಮಕ್ಕಳು ಸಿಇಟಿ ಸೇರಿದಂತೆ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ವಿಶೇಷ ತರಬೇತಿಯನ್ನು ನೀಡಲು ಸರ್ಕಾರ ಸಿದ್ಧವಿದೆ ಎಂದರು.

ಸಚಿವರಾದ ಗೋವಿಂದ ಕಾರಜೋಳ, ಎಂಟಿಬಿ ನಾಗರಾಜ್, ಶಶಿಕಲಾ ಜೊಲ್ಲೆ,  ಶಾಸಕ ದುರ್ಯೋಧನ ಐಹೊಳೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...